Wednesday, 25 Nov, 7.59 am Kannada News Now

ಕರ್ನಾಟಕ
ನಿವಾರ್ ಚಂಡಮಾರುತ ಎಫೆಕ್ಟ್ : ಬೆಂಗಳೂರಿನಲ್ಲಿ ಇನ್ನು ಮೂರು ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡು, ಆಂಧ್ರಪ್ರದೇಶದಲ್ಲಿ ನಿವಾರ್ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.ನಿವಾರ್ ಅಬ್ಬರಿಸುವ ಮುನ್ನ ಗಂಟೆಗೆ 100ಕ್ಕಿಂತಲೂ ಹೆಚ್ಚಿನ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.

ಚಂಡಮಾರುತದ ಎಫೆಕ್ಟ್‌ ಕೇವಲ ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿಗೆ ಮಾತ್ರವಲ್ಲದೇ ಬೆಂಗಳೂರಿಗೂ ತಟ್ಟಲಿದ್ದು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ತಗ್ಗು ಪ್ರದೇಶಗಳಲ್ಲಿ ಪ್ರವಾಹ ಸೃಷ್ಟಿಯಾಗಲಿದೆ ಎಂದು ತಿಳಿಸಿದೆ.

ಇನ್ನು ನಿವಾರ್‌ ಚಂಡಮಾರುತ ಪರಿಣಾಮದಿಂದ ಬೆಂಗಳೂರಿನಲ್ಲಿ ನ. 25 ರಿಂದ 27ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ ಬೆಂಗಳೂರು ಸೇರಿ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.



Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top