Monday, 25 Jan, 7.32 am Kannada News Now

ಭಾರತ
ಪಾಕ್ ಕದನ ವಿರಾಮ ಉಲ್ಲಂಘಿಸಿ ದಾಳಿ : ಗಾಯಗೊಂಡಿದ್ದ ಯೋಧ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮ

ಶ್ರೀನಗರ: ಪಾಕಿಸ್ತಾನ ಸೇನೆ ಕಳೆದ ವಾರ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ್ದ ವೇಳೆ ಗಾಯಗೊಂಡಿದ್ದ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಈ ಕುರಿತಂತೆ ಭಾರತೀಯ ಸೇನೆ ಪ್ರಕಟಣೆ ಹೊರಡಿಸಿದ್ದು, ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಸುಂದರ್‌ಬನಿ ಸೆಕ್ಟರ್ ನಲ್ಲಿ ಪಾಕಿಸ್ತಾನ ಸೇನೆ ಜನವರಿ 18ರಂದು ದಾಳಿ ನಡೆಸಿ ಕದನ ವಿರಾಮ ಉಲ್ಲಂಘಿಸಿತ್ತು. ಭಾರತೀಯ ಸೇನೆ ಪ್ರತಿದಾಳಿ ನಡೆಸಿತ್ತು. ಈ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಎನ್.‌ಕೆ. ನಿಶಾಂತ್‌ ಶರ್ಮಾ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದರೆ ಇದೀಗ ನಿಶಾಂತ್‌ ಶರ್ಮಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಗಣರಾಜ್ಯೋತ್ಸವ ನಂತ್ರ ಟ್ರ್ಯಾಕ್ಟರ್ ರ್ಯಾಲಿಗೆ ದೆಹಲಿ ಪೊಲೀಸರಿಂದ ʼಷರತ್ತುಬದ್ಧ ಅನುಮತಿʼ..!

ಈ ಬಗ್ಗೆ ಮಾಹಿತಿ ನೀಡಿರುವ ಸೇನೆ, 'ಎನ್.‌ಕೆ. ನಾಯಕ್ ನಿಶಾಂತ್‌ ಶರ್ಮಾ ಅವರ ತ್ಯಾಗ ಮತ್ತು ಕರ್ತವ್ಯ ನಿಷ್ಠೆಗಾಗಿ ದೇಶವು ಸದಾ ಅವರಿಗೆ ಋಣಿಯಾಗಿರುತ್ತದೆ' ಎಂದೂ ಗೌರವ ಸಮರ್ಪಿಸಿದೆ.

ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್‌ ಸೇರಿಕೊಳ್ಳಿ
https://bit.ly/367sVuW

ʼPNBʼ ಗ್ರಾಹಕರೇ ಗಮನಿಸಿ: ಹಣದ ವ್ಯವಹಾರವಿದ್ರೆ ʼಮಾ.31ʼರೊಳಗೆ ಮುಗಿಸಿಕೊಳ್ಳಿ, ಯಾಕಂದ್ರೆ..?Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top