ವಿಶ್ವ ಸಂಸ್ಥೆ: ಪಾಕಿಸ್ತಾನದಲ್ಲಿ ಹಿಂದುಗಳು ಸೇರಿದಂತೆ ಎಲ್ಲ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಯುತ್ತಿರುವ ವಿಷಯ ಸಧ್ಯ ವಿಶ್ವೆದೆದರು ಜಗತ್ ಜಾಹಿರಾಗಿದ್ದು, ವಿಶ್ವಸಂಸ್ಥೆ ವೇದಿಕೆಯೊಂದರಲ್ಲಿ ಭಾರತ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೇ ದೌರ್ಜನ್ಯವನ್ನ ಕೂಡಲೇ ನಿಲ್ಲಿಲಿಸಬೇಕೆಂದು ಖಡಕ್ ಎಚ್ಚರಿಕೆ ನೀಡಿದೆ.
ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 45ನೇ ಅಧಿವೇಶನದಲ್ಲಿ ಮಾತನಾಡಿದ ಭಾರತೀಯ ಪ್ರತಿನಿಧಿ, ''ಪಾಕಿಸ್ತಾನದಲ್ಲಿ ಸಾವಿರಾರು ಸಿಖ್ಖರು, ಹಿಂದುಗಳು ಮತ್ತು ಕ್ರೈಸ್ತ ಅಲ್ಪಸಂಖ್ಯಾತ ಮಹಿಳೆಯರು ಹಾಗೂ ಹುಡುಗಿಯರು ಅಪಹರಣಕ್ಕೆ ಒಳಗಾಗುತ್ತಿದ್ದಾರೆ. ಅವರನ್ನು ಮತಾಂತರ ಮಾಡಿ, ಬಲವಂತದ ಮದುವೆ ಮಾಡಲಾಗ್ತಿದೆ'' ಎಂದು ತಿಳಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಕರಾಳ ಮುಖವನ್ನು ಬಯಲು ಮಾಡಿದ್ದಾರೆ.

