Dailyhunt
ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಪಡಿತರ ಅಕ್ಕಿಯಲ್ಲಿ ಮತ್ತೆ ಕಡಿತ

ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಪಡಿತರ ಅಕ್ಕಿಯಲ್ಲಿ ಮತ್ತೆ ಕಡಿತ

Kannada News Now 4 years ago

ಬೆಂಗಳೂರು : ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ ವಿತರಿಸುತ್ತಿರುವ ಅಕ್ಕಿಯ ಪ್ರಮಾಣವನ್ನು ರಾಜ್ಯ ಸರ್ಕಾರ 5 ಕೆಜಿಯಿಂದ 2 ಕೆಜಿಗೆ ಮತ್ತೆ ಕಡಿತಗೊಳಿಸಿದೆ.

ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿ ಸದಸ್ಯನಿಗೆ ಈ ಹಿಂದೆ 5 ಕೆಜಿ ಅಕ್ಕಿ, 2 ಕೆಜಿ ಗೋಧಿ ವಿತರಿಸಲಾಗುತ್ತಿತ್ತು. ಆದರೆ ಈ ತಿಂಗಳಿನಿಂದ 2 ಕೆಜಿ ಅಕ್ಕಿ, 3 ಕೆಜಿ ರಾಗಿ ಮತ್ತು 2 ಕೆಜಿ ಗೋಧಿ ನೀಡಲಾಗುತ್ತಿದೆ. ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿಗೆ 15 ಕೆಜಿ ಅಕ್ಕಿ, 20 ಕೆಜಿ ರಾಗಿ ನೀಡಲಾಗುತ್ತಿದೆ. ಈ ಮೂಲಕ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ ಎದುರಾಗಿದೆ.

ರಾಜ್ಯದಲ್ಲಿ ಅಕ್ಕಿಯನ್ನು ಹೊರರಾಜ್ಯಗಳಿಂದ ಆಮದು ಮಾಡಿಕೊಂಡು ವಿತರಿಸಲಾಗುತ್ತಿತ್ತು.

ಅದರ ಬದಲು ರಾಜ್ಯದ ರೈತರು ಬೆಳೆದ ರಾಗಿಯನ್ನು ಬೆಂಬಲ ಬೆಲೆ ನೀಡಿ ಖರೀದಿಸಿ ಪಡಿತರ ವ್ಯವಸ್ಥೆ ಮೂಲಕ ವಿತರಿಸಲು ಮುಂದಾಗಿದೆ. ರಾಗಿ, ಜೋಳ ಬೆಳೆಯುವ ಕರ್ನಾಟಕದ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಪಡಿತರ ಚೀಟಿದಾರರಿಗೆ ಅಕ್ಕಿ ಕಡಿತ ಮಾಡಿ ರಾಗಿ, ಜೋಳ ನೀಡಲು ನಿರ್ಧರಿಸಲಾಗಿದೆ.







Dailyhunt
Disclaimer: This content has not been generated, created or edited by Dailyhunt. Publisher: Kannada News Now