Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ: ಬೆಂಗಳೂರಿನಲ್ಲಿ ಉನ್ನತ ಮಟ್ಟದ ಪೂರ್ವಭಾವಿ ಸಭೆ

ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ: ಬೆಂಗಳೂರಿನಲ್ಲಿ ಉನ್ನತ ಮಟ್ಟದ ಪೂರ್ವಭಾವಿ ಸಭೆ

Kannada News Now 2 weeks ago

ಬೆಂಗಳೂರು: ಮುಂಬರುವ ಸೆಪ್ಟೆಂಬರ್ 5ರಂದು ನಡೆಯಲಿರುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ನಗರದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಜರುಗಿತು.

​ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರ ಜಂಟಿ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ, ಕಾರ್ಯಕ್ರಮದ ಒಟ್ಟಾರೆ ರೂಪುರೇಷೆ, ವೇದಿಕೆ ನಿರ್ವಹಣೆ ಮತ್ತು ಶಿಕ್ಷಕರಿಗೆ ನೀಡಲಾಗುವ ಗೌರವ-ಸನ್ಮಾನಗಳ ಕುರಿತು ಸುದೀರ್ಘ ಸಮಾಲೋಚನೆ ನಡೆಸಲಾಯಿತು.

​ಕಾರ್ಯಕ್ರಮಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಸಮಾರಂಭವು ಯಶಸ್ವಿಯಾಗಿ ನೆರವೇರುವಂತೆ ಸಮನ್ವಯದಿಂದ ಕಾರ್ಯನಿರ್ವಹಿಸಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸಚಿವರು ಸ್ಪಷ್ಟ ನಿರ್ದೇಶನ ನೀಡಿದರು.

​ಈ ಸಂದರ್ಭದಲ್ಲಿ ಕಂಪ್ಲಿ ಶಾಸಕ ಜಿ.ಎನ್. ಗಣೇಶ್ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Kannada News Now