Kannada News Now

1.6M Followers

ರಾಜ್ಯ ಸರ್ಕಾರದಿಂದ `ಅತಿಥಿ ಶಿಕ್ಷಕ'ರಿಗೆ ಭರ್ಜರಿ ಗುಡ್ ನ್ಯೂಸ್

07 Feb 2021.07:23 AM

ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದ್ದು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ಗೌರವಧನ ಪರಿಷ್ಕರಣೆಯಾಗುವ ಸಾಧ್ಯತೆಯಿದೆ.

'ಹೊಸ ಪಡಿತರ' ಚೀಟಿ ಪಡೆಯಲು 'ONLINE' ಸೇವೆ ಮತ್ತೆ ಶುರು : ರಾಜ್ಯ ಸರ್ಕಾರದಿಂದ ಆದೇಶ

ಬಜೆಟ್ ಪೂರ್ವಭಾವಿಯಾಗಿ ಅಧಿಕಾರಿಗಳೊಂದಿಗೆ ಸಚಿವ ಸುರೇಶ್ ಕುಮಾರ್ ನಡೆಸಿದ ಸಭೆಯಲ್ಲಿ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ ಮಾಡುವ ಸಂಬಂಧ ಚರ್ಚೆ ನಡೆದಿದ್ದು, ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳಿಗೆ ಮಾಸಿಕ ಕನಿಷ್ಟ ಗೌರವಧನ ನೀಡಲಾಗುತ್ತಿದೆ.

ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಗೌರವಧನ ಹೆಚ್ಚಿಸುವ ಬಗ್ಗೆ ಬಜೆಟ್ ನಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

BIG NEWS : ಡ್ರೈವಿಂಗ್ ಪರೀಕ್ಷೆ ಇಲ್ಲದೆ ಇನ್ಮುಂದೆ `DL' : ಕೇಂದ್ರದಿಂದ ಕರಡು ಅಧಿಸೂಚನೆ ಪ್ರಕಟ







Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags