Dailyhunt
ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್

ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್

Kannada News Now 5 years ago

ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಲಾಕ್​ಡೌನ್​ ಅವಧಿಯ ವೇತನ ಬಿಡುಗಡೆ ಮಾಡಿದೆ.

ಹೌದು, ರಾಜ್ಯದ ಪದವಿ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಲಾಕ್​ಡೌನ್​ ಅವಧಿಯ ವೇತನ ನೀಡಲು ಕಾಲೇಜು ಶಿಕ್ಷಣ ಇಲಾಖೆ 43.03 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. 2020ರ ಮಾರ್ಚ್​ 24ರಿಂದ 2020ರ ಆಗಸ್ಟ್​ 31ರ ವರೆಗಿನ ಅವಧಿಯನ್ನು ಕರ್ತವ್ಯದ ಅವಧಿಯೆಂದು ಪರಿಗಣಿಸಿ ಅತಿಥಿ ಉಪನ್ಯಾಸಕರಿಗೆ ಗೌರವಧನ ಪಾವತಿಸಲು ಇಲಾಖೆ ಒಟ್ಟಾರೆಯಾಗಿ 43.03 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅತಿಥಿ ಉಪನ್ಯಾಸಕರಿಗೆ ಮಾಸಿಕ 13 ಸಾವಿರ ರೂ.ನಂತೆ ಹಾಗೂ ಸ್ನಾತಕೋತ್ತರ ಪದವಿ ಪೂರೈಸಿ ಅತಿಥಿ ಉಪನ್ಯಾಸಕರಾದವರೆಗೆ ಮಾಸಿಕ 11 ಸಾವಿರ ರೂ.

ಪಾವತಿಸಬೇಕು. ಬಿಡುಗಡೆಯಾಗಿರುವ ಅನುದಾನವನ್ನು ಕಾಲೇಜಿನಲ್ಲೇ ಉಳಿಸಿಕೊಳ್ಳುವಂತಿಲ್ಲ. ಈ ಬಗ್ಗೆ ಅತಿಥಿ ಉಪನ್ಯಾಸಕರಿಂದ ದೂರು ಬಂದಲ್ಲಿ ಸಂಬಂಧಪಟ್ಟ ಪ್ರಾಂಶುಪಾಲರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now