ಹೋಮ್
ರಾಜ್ಯಾದ್ಯಂತ 'ವೀಕೆಂಡ್ ಕರ್ಪ್ಯೂ', ನೈಟ್ ಕರ್ಪ್ಯೂ' : ಟಫ್ ರೂಲ್ಸ್ ಬ್ರೇಕ್ ಮಾಡುವವರ ವಿರುದ್ಧ ಕೇಸ್ ದಾಖಲಿಸಿ : ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಬೊಮ್ಮಾಯಿ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸ್ಪೋಟವಾಗುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ' ವೀಕೆಂಡ್ ಕರ್ಪ್ಯೂ', ನೈಟ್ ಕರ್ಪ್ಯೂ' ಜಾರಿಗೊಳಿಸಿ ರಾಜ್ಯ ಸರ್ಕಾರ ಮಹತ್ತರದ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಡಿಜಿ & ಐಜಿಪಿ ಅವತ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದರು.
ಅನಾವಶ್ಯಕವಾಗಿ ಓಡಾಟ ನಡೆಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ., ಗುಂಪು ಸೇರುವ ಪ್ರದೇಶಗಳಲ್ಲಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮಾಸ್ಕ್ ಧರಿಸದ ಮತ್ತು ಸಾಮಾಜಿಕ ಅಂತರ ಕಾಪಾಡದ ವ್ಯಕ್ತಿ ಹಾಗೂ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.
ವೀಕೆಂಡ್ ಲಾಕ್ ಡೌನ್ ನಲ್ಲಿ ನಗರಕ್ಕೆ ಬರುವ ಸ್ಥಳಗಳಲ್ಲಿ ಚೆಕ್ ಪೋಸ್ಟ್ ಹಾಕಲು ಸೂಚನೆ ನೀಡಲಾಗಿದೆ. ನಗರದ ಎಲ್ಲಾ ಫ್ಲ್ಯೈ ಓವರ್ ಗಳಮನ್ನು ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೂ ಬಂದ್ ಮಾಡಲು ಸಭೆಯಲ್ಲಿ ಸೂಚನೆ ನೀಡಲಾಗಿದೆ. ಅಗತ್ಯ ಸೇವೆಗಳ ವಾಹನ ಸಂಚಾರಕ್ಕೆ ಮಾತ್ರ ಅವಕಾಶ ನೀಡಬೇಕು, ಟಫ್ ರೂಲ್ಸ್ ಬ್ರೇಕ್ ಮಾಡುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇಂದಿನಿಂದ ಅನ್ವಯವಾಗುವಂತೆ ಮೇ 4 ರ ತನಕ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9 ರಿಂದ ಶುಕ್ರವಾರ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಹಾಗೂ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದೆ.
ಈ ನಡುವೆ ರಾಜ್ಯದಲ್ಲಿ ಕೊರೊನಾ ಸ್ಪೋಟ ಮುಂದುವರೆದಿದ್ದು, ಇಂದು 23558 ಹೊಸ ಪ್ರಕರಣಗಳು ದಾಖಲಾಗಿವೆ (24 ಗಂಟೆಗಳಲ್ಲಿ) . ಈ ಮೂಲಕ ರಾಜ್ಯದಲ್ಲಿ ಸೋಂಕಿಗೆ ತುತ್ತಾದವರ ಸಂಖ್ಯೆ 1222202 ಕ್ಕೆ ಏರಿಕೆಯಾಗಿದೆ. ಇಂದೇ ವೇಳೆ 116 ಮಂದಿ ಸಾವನ್ನಪ್ಪಿದ್ದು, (24 ಗಂಟೆಗಳಲ್ಲಿ) ಇಂದಿನವರೆಗೆ ಕೋವಿಡ್-19 ಸೋಂಕಿನಿಂದ ಮೃತ ಪಟ್ಟವರ ಒಟ್ಟು ಸಂಖ್ಯೆ 13762 ಆಗಿದೆ. ಬೆಂಗಳೂರಿನಲ್ಲಿ ಇಂದು ಬರೋಬ್ಬರಿ 13640 ಕೇಸ್ ಪತ್ತೆಯಾಗಿದ್ದು, 70 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇಂದು 3509 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಸದ್ಯ 124894 ಸಕ್ರಿಯ ಪ್ರಕರಣಗಳಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.