ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಬೆಡ್‌ಗಳನ್ನು 4,000 ದಿಂದ 24,000ಕ್ಕೆ ಹೆಚ್ಚಿಸಲಾಗಿದೆ. ಒಟ್ಟು 60,000 ಆಕ್ಸಿಜನ್ ಬೆಡ್‌ಗಳಿವೆ. ಆಕ್ಸಿಜನ್ ಅಗತ್ಯ ಇಲ್ಲದವರು ಕೂಡ ಆಸ್ಪತ್ರೆ ಸೇರಿದ್ದರಿಂದ ಬೆಡ್‌ಗಳ ಕೊರತೆ ಉಂಟಾಗಿತ್ತು. ಇದನ್ನು ತಡೆಯಲು ದಾಖಲಾತಿಗೆ ಮುನ್ನ ಭೌತಿಕ ಪರೀಕ್ಷೆ ಮಾಡುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ರಾಜ್ಯ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಬೇಡಿಕೆ ಹಿನ್ನೆಲೆಯಲ್ಲಿ 5 ಲಕ್ಷ ರೆಮಿಡಿಸಿವಿರ್ ಇಂಜೆಕ್ಷನ್ ಆಮದು ಮಾಡಿಕೊಳ್ಳುತ್ತಿದ್ದು, ಈ ಸಲುವಾಗಿ ಜಾಗತಿಕ ಟೆಂಡರ್ ಕರೆಯಲಾಗಿದೆ 'ಇಡೀ ರಾಜ್ಯದಲ್ಲಿ ಎಲ್ಲಿಯೂ ರೆಮಿಡಿಸಿವರ್ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗಿದೆ.
ಕೋವಿಡ್ ಕುರಿತ ಎಲ್ಲಾ ಲೇಟೆಸ್ಟ್ ಅಪ್‌ಡೇಟ್ಸ್ ಓದಿ
ಕೊರೊನಾ ಎರಡನೇ ಅಲೆಯನ್ನು ಎದುರಿಸಲು 15,000 ಆಮ್ಲಜನಕ ಸಾಂದ್ರಕಗಳ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ ಈಗಾಗಲೇ 3,000 ಆಮ್ಲಜನಕ ಸಾಂದ್ರಕಗಳ ಖರೀದಿಗೆ ಆದೇಶ ನೀಡಲಾಗಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

