Saturday, 28 Nov, 12.59 pm Kannada News Now

ಕರ್ನಾಟಕ
ರಾಜ್ಯದಲ್ಲಿ ಗರಿಗೆದರಿದ 'ರಾಜಕೀಯ ವಿದ್ಯಾಮಾನ' : ಸಿಎಂ ಯಡಿಯೂರಪ್ಪ ಭೇಟಿಯಾದ ಸಾಲು ಸಾಲು 'ಬಿಜೆಪಿ ನಾಯಕರು'

ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ಶಿರಾ ಮತ್ತು ರಾಜರಾಜೇಶ್ವರಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ, ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದ ಸಚಿವ ಸಂಪುಟ, ಮತ್ತೊಮ್ಮೆ ವಿಸ್ತರಣೆಯಾಗಲಿದೆ. ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಒಂದು ದಂಡೇ ಸಿಎಂ ಭೇಟಿಯಾದ್ರೇ.. ಈಗಾಗಲೇ ಸಚಿವ ಸಂಪುಟ ಸೇರಿರುವಂತ ಸಚಿವರು ಮತ್ತೊಂದು ಹುದ್ದೆ, ಡಿಸಿಎಂ ಸ್ಥಾನದ ಮೇಲೆ ಕಣ್ಣಿಟ್ಟು ಸಿಎಂ ಭೇಟಿಯಲ್ಲಿ ತೊಡಗಿದ್ದಾರೆ. ಹೀಗಾಗಿ ಇಂದು ರಾಜ್ಯ ರಾಜಕೀಯದಲ್ಲಿ ವಿದ್ಯಾಮಾನ ಗರಿಗೆದರಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಸಾಲು ಸಾಲು ಬಿಜೆಪಿ ನಾಯಕರು ಭೇಟಿಯಾಗುತ್ತಿದ್ದಾರೆ.

ಒಂದೆಡೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದರೇ, ಮತ್ತೊಂದೆಡೆ ರಾಜ್ಯ ರಾಜಕೀಯದಲ್ಲಿ ವಿದ್ಯಾಮಾನಗಳು ಗರಿಗೆದರಿವೆ. ಸಿಎಂ ಯಡಿಯೂರಪ್ಪ ಭೇಟಿ ಮಾಡಿರುವಂತ ಶಾಸಕ ಬೆಳ್ಳಿ ಪ್ರಕಾಶ್, ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನದ ಬೇಡಿಕೆಯನ್ನು ಇಟ್ಟಿದ್ದಾರೆ ಎನ್ನಲಾಗಿದೆ.

ಇನ್ನೂ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಕೂಡ ಸಿಎಂ ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ತಮ್ಮ ಸ್ಥಾನಕ್ಕೆ ಯಾವುದೇ ಚ್ಯುತಿ ಬಾರದಂತೆ ಮುಂದುವರೆಸುವಂತ ಕೋರಿಕೆಯ ಮನವಿಯನ್ನು ಮಾಡದ್ದಾರೆ ಎನ್ನಲಾಗಿದೆ. ಎಂಟಿಬಿ ನಾಗರಾಜ್ ಕೂಡ ಸಿಎಂ ಭೇಟಿಯಾಗಿ ತಮ್ಮ ಬೇಡಿಕೆಯನ್ನು ಈಡೇರಿಸುವಂತೆಯೂ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಿಎಂ ಭೇಟಿಯಲ್ಲಿ ಬಿಜೆಪಿಯ ಸಾಲು ಸಾಲು ನಾಯಕರೇ ನಿರತರಾಗಿದ್ದಾರೆ.

ಡಿಸಿಎಂ ಸವದಿ ಬಳಿಕ ಸಿಎಂ ಯಡಿಯೂರಪ್ಪ ಭೇಟಿಯಾದಂತ ಸಚಿವ ರಮೇಶ್ ಜಾರಕಿಹೊಳಿಯವರು, ಸಚಿವ ಸ್ಥಾನದ ಜೊತೆಗೆ ಡಿಸಿಎಂ ಹುದ್ದೆಯನ್ನು ಕೂಡ ನೀಡುವ ಬೇಡಿಕೆಯನ್ನು ಸಿಎಂ ಯಡಿಯೂರಪ್ಪ ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಈ ಮೂಲಕ ಇದೀಗ ರಾಜ್ಯ ರಾಜಕೀಯ ಚುರುಕು ಪಡೆದಿದ್ದು, ಸಂಪುಟ ವಿಸ್ತರಣೆ, ಪುನರ್ ರಚನೆಗೂ ಮುನ್ನವ್ವೇ ರಾಜ್ಯ ರಾಜಕೀಯ ಕಣ ಬಿರುಸು ಪಡೆದಿದೆ. ಆದ್ರೇ ಸಿಎಂ ಜೊತೆಗೆ ಬಿಜೆಪಿ ಹೈಕಮಾಂಡ್ ಬೇಡಿಕೆಗಳ ಪಟ್ಟಿಯನ್ನು, ಮನವಿಯನ್ನು ಪುರಸ್ಕರಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.



Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top