Tuesday, 20 Oct, 6.14 am Kannada News Now

ಕರ್ನಾಟಕ
ರಾಜ್ಯದಲ್ಲಿ ಇಂದಿನಿಂದ ಮತ್ತೆ ಭಾರೀ ಮಳೆ ಸಾಧ್ಯತೆ : ಉತ್ತರ ಕರ್ನಾಟದಲ್ಲಿ `ಯೆಲ್ಲೋ ಅಲರ್ಟ್' ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಗಾಳಿಯ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅ. 22 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಅ. 20 ಮತ್ತು 21ರಂದು ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅಕ್ಟೋಬರ್ 22 ರೂದಮ ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top