Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯದಲ್ಲಿ ಮತ್ತೆ ಕೊರೊನಾಂತಕ : ಒಂದೇ ಶಾಲೆಯ 21 ವಿದ್ಯಾರ್ಥಿಗಳಿಗೆ ಸೋಂಕು ದೃಢ

ರಾಜ್ಯದಲ್ಲಿ ಮತ್ತೆ ಕೊರೊನಾಂತಕ : ಒಂದೇ ಶಾಲೆಯ 21 ವಿದ್ಯಾರ್ಥಿಗಳಿಗೆ ಸೋಂಕು ದೃಢ

Kannada News Now 4 years ago

ಕೊಡಗು : ಕೊರೊನಾ ಪ್ರಕರಣಗಳು ಕಡಿಮೆಯಾಗಿದ್ದು, ರಾಜ್ಯ ಯಾಥಾಸ್ಥಿತಿಯತ್ತಾ ಮರುಳುತ್ತಿದ್ದೆ. ಈ ನಡುವೆ ಮತ್ತೆ ಕೊರೊನಾಂತಕ ಶುರುವಾಗಿದ್ದು, ಮಡಿಕೇರಿಯ ಹೊರವಲಯದಲ್ಲಿರುವ ನವೋದಯ ಶಾಲೆಯ 21 ವಿದ್ಯಾರ್ಥಿಗಳಲ್ಲಿ ಸೋಂಕಿಗೆ ತುತ್ತಾಗಿದ್ದಾರೆ.


ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

ಈ ಪೈಕಿ 18 ವಿದ್ಯಾರ್ಥಿಗಳನ್ನು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಉಳಿದ ಮೂವರು ವಿದ್ಯಾರ್ಥಿಗಳು ಮನೆಗೆ ತೆರಳಿದ್ದಾರೆ.

ಅಂದ್ಹಾಗೆ, ಶಾಲೆಯ ಒಟ್ಟು 279 ವಿದ್ಯಾರ್ಥಿಗಳನ್ನ ಕೊರೊನಾ ತಪಾಸಣೆಗೆ ಒಳಪಡಿಸಲಾಗಿತ್ತು. ಸಧ್ಯ ಈ ಪೈಕಿ 21 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ಹಾಗಾಗಿ ನಾಳೆ ಎಲ್ಲಾ 40 ಸಿಬ್ಬಂದಿಗೆ ಕೋವಿಡ್ ಟೆಸ್ಟ್ ನಡೆಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ ವೆಂಕಟೇಶ್ ತಿಳಿಸಿದ್ದಾರೆ. ಇನ್ನು ಇದೇ ವೇಳೆ ಉಳಿದೆಲ್ಲಾ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ. ಯಾರೂ ಆತಂಕಪಡುವ ಅವಶ್ಯಕತೆಯಿಲ್ಲ ಎಂದಿದ್ದಾರೆ.



Dailyhunt
Disclaimer: This content has not been generated, created or edited by Dailyhunt. Publisher: Kannada News Now