Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯದಲ್ಲಿ `ಒಸಿ' ಇಲ್ಲದ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಆ.15ರವರೆಗೆ ಕಾಲಾವಕಾಶ ವಿಸ್ತರಣೆ

ರಾಜ್ಯದಲ್ಲಿ `ಒಸಿ' ಇಲ್ಲದ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಆ.15ರವರೆಗೆ ಕಾಲಾವಕಾಶ ವಿಸ್ತರಣೆ

Kannada News Now 4 months ago

ಬೆಂಗಳೂರು: ಸ್ವಾಧೀನ ಪ್ರಮಾಣಪತ್ರ (Occupancy Certificate - OC) ಇಲ್ಲದಿದ್ದರೂ ನಿಯಮಾನುಸಾರ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ಕಾಯಂ ವಿದ್ಯುತ್ ಸಂಪರ್ಕ ಕಲ್ಪಿಸುವ ಮಹತ್ವದ ಯೋಜನೆಯ ಗಡುವನ್ನು ಆಗಸ್ಟ್ 15ರವರೆಗೆ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಈ ಹಿಂದೆ ಕಾಯಂ ವಿದ್ಯುತ್ ಸಂಪರ್ಕಕ್ಕಾಗಿ ಮೇ 31ರ ಒಳಗೆ ಅರ್ಜಿ ಸಲ್ಲಿಸಿದ ಪ್ರಕರಣಗಳಿಗೆ ಮಾತ್ರ ಸೀಮಿತವಾಗಿ ಅವಕಾಶ ನೀಡಲಾಗಿತ್ತು. ಆದರೆ, ಸಾರ್ವಜನಿಕರ ಹಿತದೃಷ್ಟಿಯಿಂದ ಈಗ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವ ಹಾಗೂ ಯಾವುದೇ ವಿದ್ಯುತ್ ಸಂಪರ್ಕ ಪಡೆಯದೆ ಪೂರ್ಣಗೊಂಡಿರುವ ಪ್ರಕರಣಗಳಿಗೂ ಅನ್ವಯವಾಗುವಂತೆ ಈ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.

ಯಾರಿಗೆ ಅನ್ವಯಿಸುತ್ತದೆ?
ಈ ಸೌಲಭ್ಯವು ಕೇವಲ ವಸತಿ ಕಟ್ಟಡಗಳಿಗೆ ಮಾತ್ರ ಸೀಮಿತವಾಗಿದೆ. 2,400 ಚದರ ಅಡಿ ಅಳತೆಯವರೆಗಿನ ನಿವೇಶನಗಳಲ್ಲಿ ಶೇಕಡಾ 20ರಷ್ಟು ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ ನಿರ್ಮಿಸಲಾಗಿರುವ ಜಿ+3 (ನೆಲಮಹಡಿ + 3 ಅಂತಸ್ತು) ವಸತಿ ಕಟ್ಟಡಗಳು ಅಥವಾ ಸ್ಟಿಲ್ಟ್ ಪಾರ್ಕಿಂಗ್ ಒಳಗೊಂಡಂತೆ 4 ಮಹಡಿಗಳನ್ನು ಹೊಂದಿರುವ ವಸತಿ ಕಟ್ಟಡಗಳಿಗೆ ಮಾತ್ರ ಇದು ಅನ್ವಯವಾಗುತ್ತದೆ.

ವಾಣಿಜ್ಯ ಕಟ್ಟಡಗಳಿಗೆ ನಿರ್ಬಂಧ
ಸುಪ್ರೀಂ ಕೋರ್ಟ್ ನೀಡಿರುವ ಮಹತ್ವದ ಆದೇಶದ ಹಿನ್ನೆಲೆಯಲ್ಲಿ, ಈ ಸೌಲಭ್ಯವನ್ನು ವಾಣಿಜ್ಯ ಬಳಕೆಯ ಕಟ್ಟಡಗಳಿಗೆ ವಿಸ್ತರಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. ವಾಣಿಜ್ಯ ಕಟ್ಟಡಗಳಿಗೆ ಯಾವುದೇ ಕಾರಣಕ್ಕೂ ಈ ಯೋಜನೆಯಡಿ ಹೊಸ ವಿದ್ಯುತ್ ಸಂಪರ್ಕ ನೀಡುವ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now