Sunday, 22 Nov, 8.29 am Kannada News Now

ಹೋಮ್
ರಾಜ್ಯದ ಜನತೆಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ : ಸರ್ಕಾರಿ ಆಸ್ಪತ್ರೆಗಳಲ್ಲಿ `ಸಿಟಿ ಸ್ಕ್ಯಾನ್' ಸೇರಿ ಎಲ್ಲಾ ಮಾದರಿ ಪರೀಕ್ಷೆಗಳು ಉಚಿತ!

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ಸಿಟಿ ಸ್ಕ್ಯಾನ್, ರಕ್ತ ಪರೀಕ್ಷೆ ಸೇರಿದಂತೆ ಎಲ್ಲ ಮಾದರಿ ಪರೀಕ್ಷೆಗಳನ್ನು ಸಂಪೂರ್ಣವಾಗಿ ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ನಗರ ಮತ್ತು ಗ್ರಾಮೀಣ ಜನರ ಆರೋಗ್ಯ ರಕ್ಷಣ ದೃಷ್ಟಿಯಿಂದ ರಾಜ್ಯದ 2,300 ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 24/7 ಆಗಿ ಕಾರ್ಯನಿರ್ವಹಿಸುವಂತೆ ಪರಿವರ್ತಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ದಿನದ 24 ಗಂಟೆ ಸೇವೆ ನೀಡಲು ಉನ್ನತೀಕರಣಗೊಳಿಸಲಾಗುವುದು ಎಂದು ಹೇಳಿದ್ದಾರೆ. ಇನ್ನು 2021 ರ ಜನವರಿಯಿಂದ ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಮಾಹಿತಿ ನೀಡಿದರು.



Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top