ಬೆಂಗಳೂರು : ರಾಜ್ಯದ ಪಿಯು ಉಪನ್ಯಾಸಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪಿಯು ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರಲು ಉಪನ್ಯಾಸಕರು ಮನೆಯಿಂದಲೇ ಕೆಲಸ ಮಾಡಲು ಸೂಚಿಸಿದ್ದಾರೆ.
ರಾಜ್ಯಾದ್ಯಂತ ಹೆಚ್ಚುತ್ತಿರುವ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರ ಮಾನಸಿಕ ಒತ್ತಡಗಳು ಸೇರಿದಂತೆ ಎಲ್ಲ ಆಯಾಮಗಳನ್ನು ಚರ್ಚಿಸಲಾಗಿದ್ದು, ಉಪನ್ಯಾಸಕರು ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಹೇಳಿದ್ದಾರೆ.
ಇಲಾಖೆಯ ಪಠ್ಯ ಬೋಧನಾ ಕ್ರಮಗಳನ್ನು ವಿದ್ಯಾರ್ಥಿಗಳೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲಾ ಆಡಳಿತಾತ್ಮಕ ಕ್ರಮಗಳಿಗೆ ಅವರು ಸದಾ ಲಭ್ಯವಾಗಬೇಕಿದೆ.

