Kannada News Now

1.7M Followers

Rain in Karnataka : ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್' ಘೋಷಣೆ

06 Apr 2022.07:23 AM

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

BIG NEWS: ‌ದ್ವೀಪ ರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿಯನ್ನು ಹಿಂಪಡೆದ ಲಂಕಾ ಅಧ್ಯಕ್ಷ ʻಗೋತಬಯ ರಾಜಪಕ್ಸೆʼ

ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಮಲೆನಾಡು, ಬೆಂಗಳೂರು, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

BIGG NEWS : ರಾಜಕೀಯ ಬಿಟ್ಟು ಸನ್ಯಾಸತ್ವದ ಕಡೆಗೆ ಮಾಜಿ ಸಚಿವ ಬಿ.ಜೆ ಪುಟ್ಟಸ್ವಾಮಿ : ಗಾಣಿಕ ಸ್ವಾಮೀಜಿಯಾಗಿ ಪಟ್ಟಾಭಿಷೇಕಕ್ಕೆ ಸಿದ್ಧತೆ!

ಇಂದು ಬೆಂಗಳೂರು, ಚಾಮರಾಜನಗರ, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಇಂದಿನಿಂದ 4 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags