Dailyhunt
`RTE' : ವಿದ್ಯಾರ್ಥಿಗಳ ಶುಲ್ಕ ಮರುಪಾವತಿಗೆ ಜುಲೈ 5 ರವರೆಗೆ ಅವಕಾಶ

`RTE' : ವಿದ್ಯಾರ್ಥಿಗಳ ಶುಲ್ಕ ಮರುಪಾವತಿಗೆ ಜುಲೈ 5 ರವರೆಗೆ ಅವಕಾಶ

Kannada News Now 4 years ago

ಬೆಂಗಳೂರು : ಪ್ರಸಕ್ತ ಶಿಕ್ಷಣ ಹಕ್ಕು ಕಾಯ್ದೆ ಅಡಿಯಲ್ಲಿ ಖಾಸಗಿ ಶಾಲೆಗಳ ಪ್ರವೇಶ ಪಡೆದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿಗೆ ನಿರ್ದಿಷ್ಟ ತಂತ್ರಾಂಶದಲ್ಲಿ ಪ್ರಸ್ತಾವನೆ ಸಲ್ಲಿಸಲು ಜುಲೈ 5 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಶಿಕ್ಷಣ ಹಕ್ಕು ಕಾಯ್ದೆ 2009 ಸೆಕ್ಷನ್ 12(1)(ಸಿ) ಅಡಿಯಲ್ಲಿ ಖಾಸಗಿ ಶಾಲೆಗಳ ಪ್ರವೇಶ ಪಡೆದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿಯನ್ನು ಸರ್ಕಾರ ಮಾಡುತ್ತದೆ. ಶುಲ್ಕ ಮರುಪಾವತಿಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್ ಲೈನ್ ಮೂಲಕ ಬೇಡಿಕೆ ಸಲ್ಲಿಸಲು ಜುಲೈ 5 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಖಾಸಗಿ ಅನುದಾನ ರಹತಿ ಶಾಲೆಗಳು ಶುಲ್ಕ ಮರುಪಾವತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಕ್ರಮ ವಹಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಿಸಿದೆ.



Dailyhunt
Disclaimer: This content has not been generated, created or edited by Dailyhunt. Publisher: Kannada News Now