Sunday, 11 Apr, 1.32 pm Kannada News Now

ಕರ್ನಾಟಕ
ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗದಿದ್ದರೆ ಸಂಬಳ ಕಡಿತ, ಶಿಸ್ತು ಕ್ರಮ : ಸಿಎಂ ಬಿಎಸ್ ವೈ ಖಡಕ್ ಎಚ್ಚರಿಕೆ

ರಾಯಚೂರು : ಮುಷ್ಕರ ನಿರತ ಸಾರಿಗೆ ನೌಕರರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಬಿಗ್ ಶಾಕ್ ನೀಡಿದ್ದು, ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗದಿದ್ದರೆ ವೇತನ ಕಡಿತ ಮಾಡುವುದರ ಜೊತೆಗೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಸಾರಿಗೆ ನೌಕರರ ಮುಷ್ಕರದ ವಿಚಾರದಲ್ಲಿ ಯಾರನ್ನೂ ಮಾತುಕತೆಗೆ ಕರೆಯುವುದಿಲ್ಲ. ನೌಕರರು ಗೌರವದಿಂದ ಕೆಲಸಕ್ಕೆ ಹಾಜರಾಗಬೇಕು. ಬಸ್ ಗಳನ್ನು ಓಡಿಸದಿದ್ದಲ್ಲಿ ಮುಂದೆ ಆಗುವ ಅನಾಹುತಗಳಿಗೆ ಅವರೇ ಹೊಣೆಯಾಗುತ್ತಾರೆ ಎಂದು ಹೇಳಿದ್ದಾರೆ.

ಇನ್ನೂ ರಾಜ್ಯದಲ್ಲಿ ಕೊರೊನಾ ವೈರಸ್ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಚರ್ಚೆ ನಡೆಸಿದ್ದು, ಹಲವು ಸಲಹೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top