ಕನಕಪುರ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕನಕಪುರ ತಾಲೂಕಿನ ಹಾರೋಹಳ್ಳಿ ಹೋಬಳಿಯ ಜಕ್ಕಸಂದ್ರ ಬಳಿಯಿರುವ ಜೈನ್ ಅಂತಾರಾಷ್ಟ್ರೀಯ ಶಾಲೆಯ ಸುಮಾರು 38 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಶಾಲೆಯಲ್ಲಿ ಒಟ್ಟು 280 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಈ ಪೈಕಿ ಸುಮಾರು 38 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎನ್ನಲಾಗಿದ್ದು, ಸದ್ಯ ಶಾಲೆಯ ಆವರಣವನ್ನು ಸೀಲ್ ಡೌನ್ ಮಾಡಲಾಗಿದೆ.
ಸೋಂಕಿತ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಸೋಂಕು ತಗುಲಿರುವ ವಿದ್ಯಾರ್ಥಿಗಳನ್ನು ಪ್ರತ್ಯೇಕಿಸಿ ಉಳಿದ ವಿದ್ಯಾರ್ಥಿಗಳನ್ನು ಐಸೋಲೇಷನ್ ನಲ್ಲಿ ಇಡಲಾಗಿದೆ.

