Sunday, 24 Jan, 9.18 am Kannada News Now

ಕರ್ನಾಟಕ
ಶಿವಮೊಗ್ಗ ಸ್ಫೋಟ ಪ್ರಕರಣ : ಹಾಲಿ ಹೈಕೋರ್ಟ್‌ ನ್ಯಾಯಾಮೂರ್ತಿಗಳಿಂದ ತನಿಖೆಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ಶಿವಮೊಗ್ಗ ಸಮೀಪದ ಕಲ್ಲು ಕ್ವಾರಿಯಲ್ಲಿ ಸ್ಫೋಟ ಸಂಭವಿಸಿ ಆರು ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಬಗ್ಗೆ ತನಿಖೆ ನಡೆಸುವಂತೆ ಕರ್ನಾಟಕದ ಪ್ರತಿಪಕ್ಷ ಕಾಂಗ್ರೆಸ್ ಶನಿವಾರ ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸುವಂತೆ ಒತ್ತಾಯ ಮಾಡಿದೆ.ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ, ಗಣಿಗಾರಿಕೆ ಯನ್ನು ಕೂಡಲೇ ನಿಲ್ಲಿಸಬೇಕು ಎಂದು ಕೂಡ ಇದೇ ವೇಳೆ ಕಾಂಗ್ರೆಸ್‌ ಒತ್ತಾಯಿಸಿದೆ.

BREAKING : ಜನವರಿ 26 ರಂದು ರಾಜ್ಯದಲ್ಲೂ ರೈತರ ಪರೇಡ್ : ಕೋಡಿಹಳ್ಳಿ ಚಂದ್ರಶೇಖರ್

'ಮೃತಪಟ್ಟವರ ಕುಟುಂಬಕ್ಕೆ ನ್ಯಾಯವಾಗಿ ಪರಿಹಾರ ನೀಡಬೇಕು. ಕೇವಲ 5 ಲಕ್ಷ ರೂ.ಗಳನ್ನು ಘೋಷಣೆ ಮಾಡದೇ ಅವರಿಗೆ ಉದ್ಯೋಗ ನೀಡಬೇಕು' ಎಂದು ವಿರೋಧ ಪಕ್ಷದ ನಾಯಕ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಹೈಕೋರ್ಟ್ ದ ಹಾಲಿ ನ್ಯಾಯಾಧೀಶರಿಂದ ಈ ಬಗ್ಗೆ ತನಿಖೆ ನಡೆಸಬೇಕು.ರಾಜ್ಯದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ, ಗಣಿಗಾರಿಕೆ ಯನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ನನ್ನ ಮಾಹಿತಿ ಪ್ರಕಾರ, ಯಾವುದೇ ಅನುಮತಿ ಇಲ್ಲದೆ ಆಂಧ್ರಪ್ರದೇಶದಿಂದ ಸ್ಫೋಟಕ ವಸ್ತುಗಳನ್ನು ತರಲಾಗಿದ್ದು, ಅದನ್ನು ಸುರಕ್ಷಿತವಾಗಿ ದಾಸ್ತಾನು ಮಾಡದೇ ಇರುವುದು ಎರಡನೇ ಅಪರಾಧ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಉತ್ತರಾಖಂಡದ 'ಏಕ್ ದಿನ್ ಕಾ ಸಿಎಂ' ಅಗಲಿದ್ದಾಳೆ ಹರಿದ್ವಾರದ 19 ವರ್ಷದ ಸೃಷ್ಟಿ ಗೋಸ್ವಾಮಿ

ಶುಕ್ರವಾರ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿರುವ ಮುಖ್ಯಮಂತ್ರಿಗಳು, ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಶಿವಮೊಗ್ಗ ನಗರದ ಹೊರವಲಯದ ಕಲ್ಲು ಕ್ವಾರಿಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐವರು ಮೃತಪಟ್ಟಿದ್ದಾರೆ. ಜಿಲೆಟಿನ್ ಕಡ್ಡಿಗಳು ಸ್ಫೋಟಕ್ಕೆ ಕಾರಣವಾಗಿವೆ ಎಂದು ಹೇಳಲಾಗಿದೆ.

ಟ್ರ್ಯಾಕ್ಟರ್ ಪರೇಡ್ ನಡೆಸುವ ಬಗ್ಗೆ ಪೊಲೀಸರಿಂದ ಅಧಿಕೃತ ಮಾಹಿತಿ ಸಿಕ್ಕಿಲ್ಲ : ಇಂದು ರಾತ್ರಿ ಅಂತಿಮ ನಿರ್ಧಾರDailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top