Dailyhunt Logo
  • Light mode
    Follow system
    Dark mode
    • Play Story
    • App Story
ಸೋನಿಯಾ ಗಾಂಧಿ ಮತದಾರರ ಪಟ್ಟಿ ವಿವಾದ: ಮರುಪರಿಶೀಲನಾ ಅರ್ಜಿ ತೀರ್ಪು ಸೆಪ್ಟೆಂಬರ್ 21ಕ್ಕೆ ಮುಂದೂಡಿದ ದೆಹಲಿ ನ್ಯಾಯಾಲಯ

ಸೋನಿಯಾ ಗಾಂಧಿ ಮತದಾರರ ಪಟ್ಟಿ ವಿವಾದ: ಮರುಪರಿಶೀಲನಾ ಅರ್ಜಿ ತೀರ್ಪು ಸೆಪ್ಟೆಂಬರ್ 21ಕ್ಕೆ ಮುಂದೂಡಿದ ದೆಹಲಿ ನ್ಯಾಯಾಲಯ

Kannada News Now 6 days ago

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು 1983 ರಲ್ಲಿ ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮುಂಚೆಯೇ ಅವರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿತ್ತು ಎಂಬ ಆರೋಪದ ತನಿಖೆಗೆ ನಿರಾಕರಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿಯ ತೀರ್ಪನ್ನು ದೆಹಲಿ ನ್ಯಾಯಾಲಯ ಶನಿವಾರ ಮುಂದೂಡಿದೆ.

ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ಈ ಪ್ರಕರಣದ ತೀರ್ಪು ಪ್ರಕಟಣೆಯನ್ನು ಸೆಪ್ಟೆಂಬರ್ 21 ಕ್ಕೆ ಮುಂದೂಡಿದ್ದಾರೆ.

ಇದಕ್ಕೂ ಮುನ್ನ ಸೋನಿಯಾ ಗಾಂಧಿ ಅವರ ಪರ ವಕೀಲರು ನ್ಯಾಯಾಲಯಕ್ಕೆ ಪ್ರತಿಕ್ರಿಯೆ ಸಲ್ಲಿಸಿದ್ದು, ಈ ದೂರು ರಾಜಕೀಯ ಪ್ರೇರಿತವಾಗಿದೆ ಮತ್ತು ಬಾಹ್ಯ ಹಿತಾಸಕ್ತಿಗಳಿಗಾಗಿ ಸಲ್ಲಿಸಲಾಗಿದೆ ಎಂದು ವಾದಿಸಿದ್ದರು. ರೌಸ್ ಅವೆನ್ಯೂ ನ್ಯಾಯಾಲಯದ ಸೆಂಟ್ರಲ್ ಡೆಲ್ಲಿ ಕೋರ್ಟ್ ಬಾರ್ ಅಸೋಸಿಯೇಷನ್‌ನ ಉಪಾಧ್ಯಕ್ಷ, ವಕೀಲ ವಿಕಾಸ್ ತ್ರಿಪಾಠಿ ಎಂಬುವರು ಈ ಹಿಂದೆ ನೀಡಿದ್ದ ದೂರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ವಜಾಗೊಳಿಸಿ ಆದೇಶಿಸಿತ್ತು. ಪ್ರಸ್ತುತ ಈ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಅರ್ಜಿದಾರರು ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now