Thursday, 22 Oct, 9.11 am Kannada News Now

ಕರ್ನಾಟಕ
ST ಸಮುದಾಯಕ್ಕೆ ಸಿಹಿಸುದ್ದಿ : ಶೀಘ್ರವೇ ರಾಜ್ಯ ಸರ್ಕಾರದಿಂದ ಮೀಸಲಾತಿ ಪ್ರಮಾಣ ಶೇ.3 ರಿಂದ 7.5 ಕ್ಕೆ ಹೆಚ್ಚಳ?

ಬೆಂಗಳೂರು : ಪರಿಶಿಷ್ಟ ಪಂಗಡಕ್ಕೆ (ST) ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡುವ ಸಾಧ್ಯತೆ ಇದ್ದು, ಎಸ್ ಟಿ ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ. 3 ರಿಂದ 7.5 ಕ್ಕೆ ಹೆಚ್ಚಿಸುವ ಕುರಿತಂತೆ ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಮುದಾಯದ ಸಂಘಟನೆಗಳ ಜೊತೆ ಫ್ರೀಡಂ ಪಾರ್ಕ್ ನಲ್ಲಿ ಬುಧವಾರದಿಂದ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಅನಿರ್ದಿಷ್ಟಾವಧಿ ಧರಣಿ ಕುಳಿತಿದ್ದು, ಈ ವೇಳೆ ಸ್ವಾಮಿಜಿ ಅವರನ್ನು ಬಸವರಾಜ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಎಸ್ ಟಿ ಪಂಗಡಕ್ಕೆ ಮೀಸಲಾತಿ ಪ್ರಮಾಣವನ್ನು ಶೇ. 7.5 ಕ್ಕೆ ಹೆಚ್ಚಿಸುವುದು ಹಾಗೂ ಸಮುದಾಯಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಕುರಿತು ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸ್ವಾಮೀಜಿಗಳಿಗೆ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಎಸ್ ಟಿ ಪಂಗಡಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಪ್ರಮಾಣವನ್ನು ಶೇ. 7.5 ಕ್ಕೆ ಹೆಚ್ಚಿಸುವಂತೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ನೀಡಿದ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಬೇಕು ಎಂದು ಆಗ್ರಹಿಸಿದ್ದಾರೆ.



Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top