ಕರ್ನಾಟಕ
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ.ಶಾಂತನಗೌಡರ್ ನಿಧನಕ್ಕೆ ಸಿಎಂ ಬಿಎಸ್ ವೈ ಸಂತಾಪ
ನವದೆಹಲಿ : ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಕರ್ನಾಟಕ ಮೂಲದ ನ್ಯಾ. ಮೋಹನ್ ಎಂ. ಶಾಂತಗೌಡರ್ ಗುರುಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ನಿಧನರಾಗಿದ್ದಾರೆ.
ಶ್ವಾಸಕೋಶ ಸೋಂಕಿನ ಸಮಸ್ಯೆಯಿಂದ ಬಳಲುತ್ತಿದ್ದ ಶಾಂತನಗೌಡರನ್ನು ಗುರುಗ್ರಾಮದ ಮೆದಾಂತ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ 12.30 ರ ಸುಮಾರಿಗೆ ವಿಧಿವಶರಾಗಿದ್ದಾರೆ.
ನ್ಯಾ. ಮೋಹನ್ ಎಂ.ಶಾಂತನಗೌಡರ ನಿಧನಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದು, ಹಾವೇರಿ ಜಿಲ್ಲೆಯವರಾದ ಮೋಹನ್ ಶಾಂತನಗೌಡರ್ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ, ಕೇರಳ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿದ್ದರು. ಅವರ ನಿಧನದಿಂದ ಒಬ್ಬ ಶ್ರೇಷ್ಠ ನ್ಯಾಯಮೂರ್ತಿಗಳನ್ನು ಕಳೆದುಕೊಂಡಂತಾಗಿದೆ . ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ , ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ .