ಕರ್ನಾಟಕ
ʼಟ್ರ್ಯಾಕ್ಟರ್ ಪರೇಡ್ʼಗೆ ಪೊಲೀಸರಿಂದ ಅನುಮತಿ ಸಿಕ್ಕಿದೆ, ಶಾಂತಿಯುತವಾಗಿ ನೆರವೇರುತ್ತೆ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸ್ತಿರುವ ರೈತರಿಗೆ ಬೆಂಬಲ ನೀಡಲು ನಾಳೆ ರಾಜ್ಯ ರಾಜ್ಯಧಾನಿಯಲ್ಲಿ ಬೃಹತ್ ಮಟ್ಟದಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ರೈತ ಸಂಘಟನೆಗಳು ಸಿದ್ಧಗೊಂಡಿವೆ. ಇನ್ನು ಈ ರ್ಯಾಲಿಗೆ ಪೊಲೀಸರಿಂದ ಅನುಮತಿ ಸಿಕ್ಕಿದೆ ಶಾಂತಿಯುತವಾಗಿ ಪ್ರತಿಭಟನೆ ನಡೆಯುತ್ತೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಅವ್ರು, 'ಟ್ರ್ಯಾಕ್ಟರ್ ಪರೇಡ್ಗೆ ಅಡ್ಡಿಪಡಿಸಲ್ಲವೆಂದು ಮುಖ್ಯ ಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಕೆಲವೊಂದಿಷ್ಟು ಪೊಲೀಸರು ಕೂಡ ಮಾತನಾಡಿದ್ದಾರೆ. ಅವ್ರು ಟ್ರ್ಯಾಕ್ಟರ್ಗಳ ಸಂಖ್ಯೆ ಕಡಿಮೆ ಮಾಡಿಕೊಳ್ಳಲು ಹೇಳಿದ್ದಾರೆ. 20 ಸಾವಿರ ರೈತರು, 8 ಸಾವಿರ ವಾಹನ ಪರೇಡ್ನಲ್ಲಿ ಭಾಗಿಯಾಗುತ್ತವೆ. ಟ್ರ್ಯಾಕ್ಟರ್ ಪರೇಡ್ ತಡೆದರೆ ಉಗ್ರ ಹೋರಾಟ ಮಾಡುತ್ತೇವೆ. ರ್ಯಾಲಿ ತಡೆದರೆ ಬೆಂಗಳೂರು ನಗರವನ್ನ ಲಾಕ್ ಮಾಡುತ್ತೇವೆ ಎಂದು ಎಚ್ಚರಿಸಿದರು.
ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್ ಸೇರಿಕೊಳ್ಳಿ
https://bit.ly/3sQOxW9