Dailyhunt Logo
  • Light mode
    Follow system
    Dark mode
    • Play Story
    • App Story
ಉಡುಪಿಯ ಕುಂದಾಪುರ ಉಪ ವಿಭಾಗದ ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ್ ಸಸ್ಪೆಂಡ್

ಉಡುಪಿಯ ಕುಂದಾಪುರ ಉಪ ವಿಭಾಗದ ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ್ ಸಸ್ಪೆಂಡ್

Kannada News Now 11 months ago

ಬೆಂಗಳೂರು: ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಹಿನ್ನಲೆಯಲ್ಲಿ ಕುಂದಾಪುರ ಉಪ ವಿಭಾಗದದ ಉಡುಪಿ ಜಿಲ್ಲೆ ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ.

ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಮಲ್ಲಿಕಾರ್ಜುನ, ತಹಶೀಲ್ದಾರ್ ಗ್ರೇಡ್-2 ಸಹಾಯಕ ಆಯುಕ್ತರ ಕಚೇರಿ, ಕುಂದಾಪುರ ಉಪ ವಿಭಾಗ, ಉಡುಪಿ ಜಿಲ್ಲೆ ಇವರು ದಿನಾಂಕ 10-10-2025ರಿಂದ ಇಲ್ಲಿಯವರೆಗೆ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೇ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗಿ, ದುರ್ನಡತೆ ತೋರಿದ್ದಾರೆ ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ, ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10(1)(ಡಿ) ಅಡಿಯಲ್ಲಿ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now