Dailyhunt Logo
  • Light mode
    Follow system
    Dark mode
    • Play Story
    • App Story
`ವೇತನ' ಕಡಿತದ ಭೀತಿಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

`ವೇತನ' ಕಡಿತದ ಭೀತಿಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

Kannada News Now 6 years ago

ಬೆಂಗಳೂರು : ವೇತನ ಕಡಿತದ ಭೀತಿಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ರಾಜ್ಯ ಸರ್ಕಾರಿ ನೌಕರರ ವೇತನ ಕಡಿತ ಮಾಡುವ ಯಾವುದೇ ನಿರ್ಧಾರವನ್ನು ಸರ್ಕಾರ ಕೈಗೊಂಡಿಲ್ಲವೆಂದು ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ನೌಕರರ ವೇತನ ಕಡಿತ ಮಾಡುವಷ್ಟು ರಾಜ್ಯದ ಆರ್ಥಿಕ ಸ್ಥಿತಿ ಕೆಟ್ಟಿಲ್ಲ. ಅಂತಹ ಪರಿಸ್ಥಿತಿ ಬಂದಾಗ ಸಿಎಂ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ. ಈ ಮೂಲಕ ವೇತನ ಕಡಿತದ ಭೀತಿಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಸಿಕ್ಕಂತಾಗಿದೆ.

ರಾಜ್ಯ ಸರ್ಕಾರವು ಕೇರಳ ಮಾದರಿಯಲ್ಲಿ ಸರ್ಕಾರಿ ನೌಕರರ ಶೇ. 30 ರಷ್ಟು ವೇತನ ಕಡಿತ ಮಾಡಲು ಚರ್ಚೆ ನಡೆಸಿದೆ ಎನ್ನಲಾಗಿತ್ತು.

ಆದರೆ ಇದೀಗ ಸರ್ಕಾರಿ ನೌಕರರ ವೇತನ ಕಡಿತ ಮಾಡುವುದಿಲ್ಲ ಎಂದು ಡಿಸಿಎಂ ಅಶ್ವತ್ಥನಾರಾಯಾಣ್ ಸ್ಪಷ್ಟಪಡಿಸಿದ್ದಾರೆ.


Dailyhunt
Disclaimer: This content has not been generated, created or edited by Dailyhunt. Publisher: Kannada News Now