Dailyhunt Logo
  • Light mode
    Follow system
    Dark mode
    • Play Story
    • App Story
'ವಿಕಸಿತ ಭಾರತ' ನಿರ್ಮಾಣಕ್ಕೆ ಯುವಜನತೆ ಮಾದಕ ವ್ಯಸನದಿಂದ ದೂರವಿರುವುದು ಅತ್ಯಗತ್ಯ : ಮನ್ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಕರೆ!

'ವಿಕಸಿತ ಭಾರತ' ನಿರ್ಮಾಣಕ್ಕೆ ಯುವಜನತೆ ಮಾದಕ ವ್ಯಸನದಿಂದ ದೂರವಿರುವುದು ಅತ್ಯಗತ್ಯ : ಮನ್ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಕರೆ!

Kannada News Now 2 weeks ago

ವದೆಹಲಿ: ದೇಶವನ್ನು ಸಂಪೂರ್ಣವಾಗಿ 'ಡ್ರಗ್ಸ್ ಫ್ರೀ' ಮಾಡುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದ್ದು, 'ವಿಕಸಿತ ಭಾರತ'ದ ಕನಸು ನನಸಾಗಲು ಯುವಜನತೆ ಮಾದಕ ವ್ಯಸನದಿಂದ ದೂರವಿರುವುದು ಅತ್ಯಗತ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.

ದೇಶವನ್ನು ಉದ್ದೇಶಿಸಿ ಪ್ರಸಾರವಾದ ತಮ್ಮ ಜನಪ್ರಿಯ 'ಮನ್ ಕಿ ಬಾತ್' ರೇಡಿಯೋ ಕಾರ್ಯಕ್ರಮದ 137ನೇ ಆವೃತ್ತಿಯಲ್ಲಿ ಮಾತನಾಡಿದ ಅವರು, ಮಾದಕ ದ್ರವ್ಯಗಳ ವಿರುದ್ಧ ಇಡೀ ಸಮಾಜ ಒಂದಾಗಿ ಧ್ವನಿ ಎತ್ತಬೇಕೆಂದು ಆಹ್ವಾನ ನೀಡಿದರು. ಮಾದಕ ವ್ಯಸನವು ಕೇವಲ ಒಬ್ಬ ವ್ಯಕ್ತಿಯನ್ನಷ್ಟೇ ಅಲ್ಲದೆ, ಇಡೀ ಕುಟುಂಬ ಮತ್ತು ಸಮಾಜವನ್ನೇ ನಾಶಪಡಿಸುತ್ತದೆ. ಹೀಗಾಗಿ ಪ್ರತಿಯೊಬ್ಬರೂ ತಮ್ಮ ಮನೆ ಮತ್ತು ಮನಗಳಿಂದಲೇ ಈ ಹೋರಾಟವನ್ನು ಆರಂಭಿಸಬೇಕು ಎಂದು ಅವರು ಮನವಿ ಮಾಡಿದರು.

ಈ ಜಾಗೃತಿ ಅಭಿಯಾನದಲ್ಲಿ ಕಂಟೆಂಟ್ ಕ್ರಿಯೇಟರ್ಸ್ ಹಾಗೂ ಯುವಜನತೆ ಪ್ರಮುಖ ಪಾತ್ರ ವಹಿಸಬೇಕು ಎಂದು ಪ್ರಧಾನಿ ಮೋದಿ ಆಶಿಸಿದರು. ಯುವ ಸಮುದಾಯಕ್ಕೆ ಸುಲಭವಾಗಿ ತಲುಪುವಂತೆ ವಿವಿಧ ಭಾಷೆಗಳಲ್ಲಿ ಆಕರ್ಷಕ ಹಾಡುಗಳು, ಸೋಷಿಯಲ್ ಮೀಡಿಯಾ ಸ್ಲೋಗನ್‌ಗಳು ಹಾಗೂ ಬೀದಿ ನಾಟಕಗಳ (ಸ್ಟ್ರೀಟ್ ಪ್ಲೇ) ಮೂಲಕ ಮಾದಕ ದ್ರವ್ಯಗಳ ಅಪಾಯದ ಬಗ್ಗೆ ಸಂದೇಶ ಬಿತ್ತರಿಸಬೇಕು ಎಂದು ಅವರು ಸಲಹೆ ನೀಡಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಇದರ ಗಂಭೀರತೆಯ ಅರಿವು ಮೂಡಿಸಲು ಪ್ರತಿಯೊಬ್ಬರೂ ವಿಶೇಷ ಅಭಿಯಾನಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಕಾಲದ ಅಗತ್ಯವಾಗಿದೆ ಎಂದರು.

ಇದೇ ವೇಳೆ, ಮಾದಕ ದ್ರವ್ಯಗಳ ವಿರುದ್ಧ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ 'ನಶಾ ಮುಕ್ತ ಯುವ ಅಭಿಯಾನ'ಕ್ಕೆ ದೇಶಾದ್ಯಂತ ಸಾರ್ವಜನಿಕರಿಂದ ವ್ಯಾಪಕ ಬೆಂಬಲ ಮತ್ತು ಅಭೂತಪೂರ್ವ ಸ್ಪಂದನೆ ಸಿಗುತ್ತಿರುವುದಕ್ಕೆ ಪ್ರಧಾನಿ ಸಂತಸ ವ್ಯಕ್ತಪಡಿಸಿದರು. ಪ್ರತಿಯೊಬ್ಬ ನಾಗರಿಕನೂ ಈ ಜಾಗೃತಿ ಚಳವಳಿಯಲ್ಲಿ ಕೈಜೋಡಿಸಿದಾಗ ಮಾತ್ರ ದೇಶವನ್ನು ಸಂಪೂರ್ಣವಾಗಿ ಮಾದಕ ವ್ಯಸನದಿಂದ ಮುಕ್ತಗೊಳಿಸಲು ಸಾಧ್ಯ ಎಂದು ಅವರು ಪುನರುಚ್ಚರಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Kannada News Now