Thursday, 22 Apr, 9.15 pm ಕನ್ನಡ ಪ್ರಭ

ಕ್ರಿಕೆಟ್
ಐಪಿಎಲ್ 2021: ಆರ್ ಸಿಬಿ ವಿರುದ್ಧ ಟಾಸ್ ಸೋತು ಬ್ಯಾಟಿಂಗ್, ರಾಜಸ್ತಾನದ 3 ವಿಕೆಟ್ ಪತನ, ಇಲ್ಲಿದೆ ಲೈವ್ ಸ್ಕೋರ್!

ಮುಂಬೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 14ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಜಸ್ತಾನ ರಾಯಲ್ಸ್ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತ ರಾಜಸ್ತಾನ ಬ್ಯಾಟಿಂಗ್ ಮಾಡುತ್ತಿದ್ದು ಆರಂಭಿಕ ಆಘಾತ ಎದುರಿಸಿದೆ. 5 ಓವರ್ ಮುಕ್ತಾಯಕ್ಕೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ರಾಜಸ್ತಾನ ಪರ ಜೋಸ್ ಬಟ್ಲರ್ 8, ಮನನ್ ವೊವ್ರಾ 7 ಮತ್ತು ಡೇವಿಡ್ ಮಿಲ್ಲರ್ ಶೂನ್ಯಕ್ಕೆ ಔಟಾಗಿದ್ದಾರೆ. ಸಂಜು ಸ್ಯಾಮ್ಸನ್ ಮತ್ತು ಶಿವಂ ದುಬೆ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಬೆಂಗಳೂರು ಪರ ಮೊಹಮ್ಮದ್ ಸಿರಾಜ್ 2 ಮತ್ತು ಜ್ಯಾಮಿನ್ಸನ್ 1 ವಿಕೆಟ್ ಪಡೆದಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್ ವೆಲ್, ಎಬಿ ಡಿವಿಲಿಯರ್ಸ್(ಕೀಪರ್), ವಾಷಿಂಗ್ಟನ್ ಸುಂದರ್, ಕೈಲ್ ಜೇಮೀಸನ್, ಕೇನ್ ರಿಚರ್ಡ್ಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada Prabha
Top