Thursday, 30 Jul, 11.22 am Kannada Suddhi

ರಾಷ್ಟ್ರೀಯ
ಅಪ್ಪನಾದ ಸಂತಸದಲ್ಲಿ ಟೀಮ್ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ

ಬೆAಗಳೂರು: ಟೀಮ್ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಪತ್ನಿ ನಟಿ ನತಾಶಾ ಸ್ಟಾಂಕೋವಿಕ್ ಗುರುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಹಾರ್ದಿಕ್ ಪಾಂಡ್ಯ ಈಗ ತಂದೆಯಾದ ಸಂತಸದಲ್ಲಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಅವರು ಮಾಹಿತಿಯನ್ನು ನಿಡಿದ್ದಾರೆ.
'ನಮಗೆ ಗಂಡು ಮಗು ಜನಿಸಿದೆ' ಎಂದು ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಹಾರ್ದಿಕ್ ಪಾಂಡ್ಯ, ಮಗುವಿನ ಕೈ ಹಿಡಿದುಕೊಂಡಿರುವ ಚಿತ್ರವನ್ನೂ ಪ್ರಕಟಿಸಿದ್ದಾರೆ. ಈ ವರ್ಷದ ಮೊದಲ ದಿನ ಸ್ಟಾಂಕೋವಿಕ್ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಹಾರ್ದಿಕ್ ಪಾಂಡ್ಯ, ಬಳಿಕ ಲಾಕ್‌ಡೌನ್ ಸಮಯದಲ್ಲಿ ತಂದೆಯಾಗುತ್ತಿರುವ ವಿಷಯವನ್ನು ಪ್ರಕಟಿಸಿ ಅಚ್ಚರಿ ಮೂಡಿಸಿದ್ದರು. ಈ ನಡುವೆ ಅವರು ಸರಳವಾಗಿ ವಿವಾಹವಾಗಿದ್ದಾರೆ ಎನ್ನಲಾಗಿದೆ.
ಇದೀಗ ಹಾರ್ದಿಕ್ ಪಾಂಡ್ಯ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada Suddhi
Top