Wednesday, 05 Aug, 5.46 am Kannada Suddhi

ರಾಷ್ಟ್ರೀಯ
ದೆಹಲಿಯಿಂದ ಲಕ್ನೋಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ:೧೧.೩೦ಕ್ಕೆ ಅಯೋಧ್ಯೆಗೆ ಆಗಮನ

ಲಕ್ನೋ: ಅಯೋಧ್ಯೆ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ಇಟ್ಟಿಗೆ ಇಡುವ ಮೂಲಕ ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಅವರು ವಾಯುಸೇನೆ ವಿಶೇಷ ವಿಮಾನದಲ್ಲಿ ಅಯೋಧ್ಯೆಯತ್ತ ರಾಷ್ಟ್ರ ರಾಜಧಾನಿ ನವದೆಹಲಿಯಿಂದ ತೆರಳಿದ್ದ ಪ್ರಧಾನಿ ಮೋದಿ ಇದೀಗ ಲಕ್ನೋಗೆ ಬಂದಿಳಿದಿದ್ದಾರೆ.
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈಗಾಗಲೇ ಅಯೋಧ್ಯೆಗೆ ಭೇಟಿ ನೀಡಿದ್ದು, ಸಿದ್ಧತೆ ಪರಿಶೀಲಿಸುತ್ತಿದ್ದಾರೆ. ಪ್ರಧಾನಿ ಮೋದಿ ಅವರು ವಿಶೇಷ ವಿಮಾನದಲ್ಲಿ ದೆಹಲಿಯಿಂದ ಲಕ್ನೋಗೆ ಬಂದಿಳಿದಿದ್ದಾರೆ. ಬಳಿಕ ೧೧.೩೦ಕ್ಕೆ ಅಯೋಧ್ಯೆಗೆ ಆಗಮಿಸಲಿದ್ದಾರೆ ಎಂದು ವರದಿ ತಿಳಿಸಿದೆ.
ಅಯೋಧ್ಯೆಗೆ ಬಂದ ಬಳಿಕ ಪ್ರಧಾನಿ ಮೋದಿ ಅವರು ಹನುಮಾನ್ ಗಡಿಗೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಐತಿಹಾಸಿಕ ಕಾರ್ಯಕ್ರಮಕ್ಕಾಗಿ ಇಡೀ ಅಯೋಧ್ಯೆ ನಗರಿ ಶೃಂಗಾರಗೊAಡಿದ್ದು, ಎಲ್ಲೆಡೆ ಬೃಹತ್ ಎಲ್ ಇಡಿ, ಸಿಸಿಟಿವಿ ಸ್ಕ್ರೀನ್ ಇಡಲಾಗಿದ್ದು, ಸಾರ್ವಜನಿಕರು ಭೂಮಿ ಪೂಜೆ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ವರದಿ ತಿಳಿಸಿದೆ.
ಮಧ್ಯಾಹ್ನ ೧೨ಗಂಟೆ ೪೪ನಿಮಿಷದ ಶುಭ ಗಳಿಗೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗುತ್ತದೆ. ಅಯೋಧ್ಯೆ ತೀರ್ಥ ಕ್ಷೇತ್ರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ೧೭೫ ಅತಿಥಿಗಳನ್ನು ಮಾತ್ರ ಆಹ್ವಾನಿಸಲಾಗಿದ್ದು, ಅವರಲ್ಲಿ ೧೩೫ ಧಾರ್ಮಿಕ ಗುರುಗಳು ಭಾಗಿಯಾಗಲಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada Suddhi
Top