Wednesday, 05 Aug, 6.32 am Kannada Suddhi

ರಾಷ್ಟ್ರೀಯ
ಶ್ರೀರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆಗೆ ಅಯೋಧ್ಯೆಗೆ ಆಗಮಿಸಿದ ಮೋದಿ

ಲಕ್ನೋ: ಅಯೋಧ್ಯೆ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ಇಟ್ಟಿಗೆ ಇಡುವ ಮೂಲಕ ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಲಕ್ನೋದಿಂದ ಹೊರಟು ಅಯೋಧ್ಯೆಗೆ ಬಂದಿಳಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ಇಟ್ಟಿಗೆ ಇಡುವ ಮೂಲಕ ಭೂಮಿಪೂಜೆ ನೆರವೇರಿಸಲಿದ್ದಾರೆ.
ಐತಿಹಾಸಿಕ ಸಂಭ್ರಮಕ್ಕೆ ಉತ್ತರ ಪ್ರದೇಶ ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈಗಾಗಲೇ ಅತಿಥಿಗಳಿಗೆ ಆಹ್ವಾನ ಸಹ ಕಳುಹಿಸಿದೆ. ಇನ್ನು ಆಗಸ್ಟ್ ೫ರಂದು ಪ್ರಧಾನಿ ಮೋದಿ ಸುಮಾರು ಮೂರು ಗಂಟೆಗಳ ಕಾಲ ಅಯೋಧ್ಯೆಯಲ್ಲಿರಲಿದ್ದಾರೆ ಎಂಬ ವಿವರ ಲಭ್ಯವಾಗಿದೆ. ಬೆಳಗ್ಗೆ ೯.೩೦ಕ್ಕೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಲಕ್ನೋ ಕಡೆ ಪ್ರಯಾಣ ಆರಂಭಿಸಲಿದ್ದಾರೆ ಎಂದು ಹೇಳಲಾಗಿದೆ.
ಅಯೋಧ್ಯೆಗೆ ಬಂದ ಬಳಿಕ ಪ್ರಧಾನಿ ಮೋದಿ ಅವರು ಹನುಮಾನ್ ಗಡಿಗೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಐತಿಹಾಸಿಕ ಕಾರ್ಯಕ್ರಮಕ್ಕಾಗಿ ಇಡೀ ಅಯೋಧ್ಯೆ ನಗರಿ ಶೃಂಗಾರಗೊAಡಿದ್ದು, ಎಲ್ಲೆಡೆ ಬೃಹತ್ ಎಲ್ ಇಡಿ, ಸಿಸಿಟಿವಿ ಸ್ಕ್ರೀನ್ ಇಡಲಾಗಿದ್ದು, ಸಾರ್ವಜನಿಕರು ಭೂಮಿ ಪೂಜೆ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ವರದಿ ತಿಳಿಸಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada Suddhi
Top