Dailyhunt Logo
  • Light mode
    Follow system
    Dark mode
    • Play Story
    • App Story
ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಮೇ.14 ಕೊನೆಯ ದಿನಾಂಕ

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಮೇ.14 ಕೊನೆಯ ದಿನಾಂಕ

ಳ್ಳಾರಿ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸುವರ್ಣಾವಕಾಶ. ಬಳ್ಳಾರಿಯಲ್ಲಿ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಅಲ್ಲಿಪುರದ ಬಿಐಟಿಎಂ ಕಾಲೇಜು ಹತ್ತಿರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ(ಸಿಬಿಎಸ್ಸಿ)ಯಲ್ಲಿ ಖಾಲಿ ಇರುವ ಗಣಿತ, ವಿಜ್ಞಾನ ಮತ್ತು ಇಂಗ್ಲೀಷ್ ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರ ನೇಮಕಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ(ಸಿಬಿಎಸ್ಸಿ)ಯ ಪ್ರಾಂಶುಪಾಲರ ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 14 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಲ್ಲಿಪುರದ ಬಿಐಟಿಎಂ ಕಾಲೇಜು ಹತ್ತಿರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ(ಸಿಬಿಎಸ್ಸಿ)ಯ ಪ್ರಾಂಶುಪಾಲರ ಕಚೇರಿ ಅವರ ಮೊ.7353346069 ಅಥವಾ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅವರ ದೂ.08392-200125 ಗೆ ಸಂಪರ್ಕಿಸಬಹುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia