ಬೆಂಗಳೂರು: ಬೇಸಿಗೆ ರಜೆಯಲ್ಲಿಯೂ ಕೆಲವು ಶಾಲೆಗಳಲ್ಲಿ 9 ರಿಂದ 10ನೇ ತರಗತಿ ಬಡ್ತಿ ಪಡೆದ ಮಕ್ಕಳಿಗೆ ಪಾಠ ಮಾಡುತ್ತಿದ್ದು, ಈ ಬಗ್ಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ವರದಿ ಕೇಳಿದೆ.
ಕೆಲವು ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ.
ಬೇಸಿಗೆ ರಜೆಯಲ್ಲಿಯು ತರಗತಿಗೆ ಹಾಜರಾಗುವಂತೆ ಶಾಲೆಗಳು ಮಕ್ಕಳ ಮೇಲೆ ಒತ್ತಡ ಹೇರುವ ಮೂಲಕ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿದ್ದು, ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಮಕ್ಕಳ ಹಕ್ಕುಗಳ ಕಾರ್ಯಕರ್ತ ವಾಸುದೇವ ಶರ್ಮಾ ಅವರು ಆಯೋಗಕ್ಕೆ ಪತ್ರ ಬರೆದು ದೂರು ಸಲ್ಲಿಸಿದ್ದಾರೆ.

