Dailyhunt
ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು: 2024 -25 ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಾದ ವಿವಿ ಕಾಲೇಜು ಮಂಗಳೂರು, ಸಂಧ್ಯಾ ಕಾಲೇಜು ಮಂಗಳೂರು, ವಿಶ್ವವಿದ್ಯಾಲಯ ಪ್ರಥಮ ದರ್ಜೆ ಕಾಲೇಜು, ಮಂಗಳ ಗಂಗೋತ್ರಿ, ನೆಲ್ಯಾಡಿ, ಬನ್ನಡ್ಕ, ಮೂಡಬಿದಿರೆ ಪದವಿ ಕಾಲೇಜುಗಳಿಗೆ ಪೂರ್ಣಕಾಲಿಕ, ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಂಗಿಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇಕಡ 55 ಅಂಕ ಪಡೆದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ ಶೇಕಡ 50ರಷ್ಟು ಅಂಕ ಪಡೆದವರು, ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಬೇಕು. ಆಗಸ್ಟ್ 8 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ತಮ್ಮ ಇಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸಬೇಕು.

ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರು ವಿವಿ ಯಾವುದೇ ಘಟಕ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಲು ಸಿದ್ದರಾಗಿರಬೇಕು. ಈ ಕುರಿತಾಗಿ ವಿವಿ ತೀರ್ಮಾನವೇ ಅಂತಿಮವಾಗಿದ್ದು, ಸಂದರ್ಶನದ ದಿನಾಂಕವನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಕುಲ ಸಚಿವರು ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia