ನ್ಯೂಸ್
ಭಗವಾನ್ ಮಹಾವೀರ ಜಯಂತಿ : ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಭಗವಾನ್ ಮಹಾವೀರ ಜಯಂತಿ : ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಕೊಪ್ಪಳ, ಭಗವಾನ್ ಶ್ರೀ ಮಹಾವೀರ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಭಗವಾನ್ ಮಹಾವೀರ ರವರ ಭಾವಚಿತ್ರಕ್ಕೆ ಇಂದು (ಏ.25) ಪುಷ್ಪ ನಮನ ಸಲ್ಲಿಸಲಾಯಿತು.
ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಗವಾನ್ ಶ್ರೀ ಮಹಾವೀರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರದಂದು ಕೋವಿಡ್-19 ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಅವರು ಭಗವಾನ್ ಶ್ರೀ ಮಹಾವೀರ ರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮಹಾವೀರ, ಶ್ರೀಧರ ಹಾಗೂ ಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶಂಕರ ಹಾಗೂ ಮುತ್ತಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು
Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannadanet