Friday, 23 Apr, 2.00 pm Kannadanet

ನ್ಯೂಸ್
ಪ್ರದಾನಿಯವರೇ ಪರದೆಯಲ್ಲಿ ಮತ್ತೆಮತ್ತೆ ಮುಖ ತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ- ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ಪ್ರಧಾನಿ‌ ನರೇಂದ್ರ ಮೋದಿಯವರೇ, ಪರದೆಯಲ್ಲಿ ಮತ್ತೆಮತ್ತೆ ಮುಖತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ,‌ ಆಗಾಗ‌ ಮುಖ್ಯಮಂತ್ರಿಗಳಿಗೆ ಪಾಠ‌ಮಾಡಲು ನೀವು ಹೆಡ್‌ಮಾಸ್ಟರ್ ಕೂಡಾ ಅಲ್ಲ. ಮೊದಲು ರಾಜ್ಯಗಳ ಬೇಡಿಕೆಗಳನ್ನು ಈಡೇರಿಸಿ #coronavirus ನಿಯಂತ್ರಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು ಪ್ರದಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಪ್ರತಿಯೊಂದು ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕ ಇಲ್ಲದೆ ಸಾಯುತ್ತಿದ್ದಾರೆ. ಆಮ್ಲಜನಕ ಪೂರೈಕೆ ಮಾಡಿ‌ ಎಂದರೆ ಅಕ್ರಮ ದಾಸ್ತಾನು‌ ಮಾಡಿದವರ ಮೇಲೆ ಕ್ರಮಕೈಗೊಳ್ಳಿ ಎಂದು ಕರೆ ನೀಡುತ್ತೀರಿ. ನೀವೇನು ರಾಜ್ಯಗಳ‌ ಅನುಮತಿ ಪಡೆದು ಆಮ್ಲಜನಕ ರಪ್ತು ಮಾಡಿದ್ದೀರಾ

@PMOIndia ? ಬೆಂಗಳೂರಿನ ಖಾಸಗಿ/ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಮೀಸಲಾದ ಹಾಸಿಗೆಗಳು 7621, ಭರ್ತಿಯಾಗಿರುವುದು 6123, ಲಭ್ಯ ಇರುವುದು 1487. ನಿತ್ಯ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ 15ಸಾವಿರಕ್ಕೂ ಹೆಚ್ಚು. ಈ ವಾಸ್ತವವನ್ನು @CMofKarnataka ನಿಮಗೇನಾದರೂ ತಿಳಿಸಿದ್ದಾರೆಯೇ @PMOIndia? ಬೆಂಗಳೂರಿನಲ್ಲಿ ಶೇ 65ರಷ್ಟು ಸಾಮಾನ್ಯ ಹಾಸಿಗೆ, ಶೇ 96ರಷ್ಟು ಬಹು ಅವಲಂಬನೆಯ ಹಾಸಿಗೆ, ಶೇ 98ರಷ್ಟು ಐಸಿಯು ಹಾಸಿಗೆ ಮತ್ತು ಶೇ 97ರಷ್ಟು ವೆಂಟಿಲೇಟರ್ ಹಾಸಿಗೆ ಭರ್ತಿಯಾಗಿವೆ. ನಿತ್ಯ 15 ಸಾವಿರಕ್ಕೂ ಹೆಚ್ಚು ಸೋಂಕಿತರು ಆಸ್ಪತ್ರೆ ಎದುರು ಕ್ಯೂ ನಿಲ್ಲುತ್ತಿದ್ದಾರೆ. ಅವರದ್ದೇನು ಗತಿ @PMOIndia? ‘ಪರಿಸ್ಥಿತಿ ಕೈಮೀರಿಹೋಗಿದೆ’ ಎಂದು @CMofKarnataka ಜನತೆಯ ಮುಂದೆ ಗೋಳಾಡುತ್ತಿರುವುದರಿಂದ ಪ್ರಶ್ನೆ ನಿಮ್ಮನ್ನೇ ಕೇಳಬೇಕಾಗಿದೆ @PMOIndia . ಕೈಲಾಗದ ಮುಖ್ಯಮಂತ್ರಿಯವರನ್ನು ಇಟ್ಟುಕೊಂಡು ಕೊರೊನಾ ನಿಯಂತ್ರಣ ಮಾಡುವುದಾದರೂ ಹೇಗೆ ಪ್ರಧಾನಿಗಳೇ? ಎಂದು ಪ್ರಶ್ನೆ ಮಾಡಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannadanet
Top