ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ( GUEST LECTURES) ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ .
ಕಳೆದ ಸಾಲಿನಲ್ಲಿ ರಾಜ್ಯದ ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರ ಸೇವೆಯನ್ನು 2021-22ನೇ ಸಾಲಿಗೂ ಮುಂದುವರಿಸಲು ಆದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಆಶ್ವತ್ಥನಾರಾಯಣ ( DCM ASHWATH NARAYAN ) ಶುಕ್ರವಾರ ತಿಳಿಸಿದ್ದಾರೆ.
ಕಳೆದ ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿದ್ದವರನ್ನು ಒಂದು ದಿನದ ಮಟ್ಟಿಗೆ ಸೇವೆಯಿಂದ ಬಿಡುಗಡೆಗೊಳಿಸಿ ಪುನಃ ಸೇವೆಗೆ ಸೇರಿಸಿಕೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ಕೋವಿಡ್ ವಿಷಮ ಪರಿಸ್ಥಿತಿಯನ್ನು ಪರಿಗಣನೆಗೆ ತೆಗೆದುಕೊಂಡು ಸಾರ್ವಜನಿಕ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಶ್ವತ್ಥ ನಾರಾಯಣ ವಿವರಿಸಿದ್ದಾರೆ.
ಹೌದು, ಕಳೆದ ಸಾಲಿನಲ್ಲಿ ಬೇರೆ ಬೇರೆ ವಿಶ್ವ ವಿದ್ಯಾಲಯಗಳಲ್ಲಿ (UNIVERSITY) ಕಾರ್ಯ ನಿರ್ವಹಿಸಿದ ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ನಿರ್ಧಾರ ಮಾಡಲಾಗಿದ್ದು, 2021- 22ನೇ ಸಾಲಿಗೂ ಸೇವೆ ಮುಂದುವರಿಸಲು ನಿರ್ಧರಿಸಲಾಗಿದೆ.

