Dailyhunt Logo
  • Light mode
    Follow system
    Dark mode
    • Play Story
    • App Story
BIGG NEWS: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ: ಇಬ್ಬರು ಪೊಲೀಸ್ ಅಧಿಕಾರಿಗಳು ಅರೆಸ್ಟ್

BIGG NEWS: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ: ಇಬ್ಬರು ಪೊಲೀಸ್ ಅಧಿಕಾರಿಗಳು ಅರೆಸ್ಟ್

Kannada News Now 4 years ago

ಕಲಬುರಗಿ: ಪಿಎಸ್‌ಐ ನೇಮಕಾತಿಯ ಪರೀಕ್ಷೆ ಅಕ್ರಮಕ್ಕೆ ( PSI Recruitment Scam ) ಸಂಬಂಧಿಸಿದಂತೆ ತನಿಖೆಯಲ್ಲಿ ಮಹತ್ತರ ಹೆಜ್ಜೆ ಇಟ್ಟಿರುವ ಸಿಐಡಿ, ಗುರುವಾರ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದೆ.

ರಾಯಚೂರು ಜಿಲ್ಲೆಯ ಲಿಂಗಸೂಗುರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಬೆರಳಚ್ಚು ವಿಭಾಗದ ಸಿಪಿಐ ಆನಂದ ಮೇತ್ರೆ ಅವರ ಬಂಧನವಾಗಿದೆ.

ಸಾಲಿ ಈ ಹಿಂದೆ ಆಳಂದ ವಿಭಾಗದ ಡಿಎಸ್ಪಿಯಾಗಿದ್ದರು. ಇಲ್ಲಿಯವರೆಗೆ ಬಂಧಿತರ ಸಂಖ್ಯೆ ಮೂವತ್ತು ದಾಟಿದೆ.

ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ಆರೋಪ ಮಾಡುತ್ತಿದೆ - ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಕ್ಷೇಪ

ನಿನ್ನೆಯಿಂದ ವಿಚಾರಣೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಇಂದು ಸತತ ನಾಲ್ಕು ಗಂಟೆಗಳ ಕಾಲ ವಿಚಾರಣೆ ಈ ಇಬ್ಬರು ಅಧಿಕಾರಿಗಳನ್ಬು ಬಂಧಿಸಲಾಯಿತು.ಬಂಧಿಸಿ ವೈದ್ಯಕೀಯ ಚಿಕಿತ್ಸೆ ಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು.

ಇಲ್ಲಿ ಯವರೆಗೆ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಗಳು, ಅಭ್ಯರ್ಥಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಅಭ್ಯರ್ಥಿಗಳು ಬಂಧನವಾಗಿದ್ದರೆ ಇಂದು ಹಿರಿಯ ಪೊಲೀಸ್ ಅಧಿಕಾರಿಗಳು ಬಂಧನವಾಗಿರುವುದನ್ನು ನೋಡಿದರೆ ಈ ಪ್ರಕರಣ ದಲ್ಲಿ ಇನ್ನೂ ಹಿರಿಯ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿರುವುದು ಸಾಬೀತು ಪಡಿಸುವಂತಾಗಿದೆ. ಇದಲ್ಲದೆ ಕಕ ಭಾಗದ ಹಿರಿಯ ಶಾಸಕರ ಹಾಗೂ ಶಾಸಕರ ಸಹೋದರ ಹೆಸರೂ ಸಹ ಕೇಳಿ ಬರುತ್ತಿದೆ. ಒಟ್ಟಾರೆ ಈ ಅಕ್ರಮ ಬಗೆದಷ್ಟು ಆಳವಾಗುತ್ತಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now