Dailyhunt
BIGG NEWS : ರಾಜ್ಯದ ಈ ನೌಕರರಿಗಿಲ್ಲ `ಆರೋಗ್ಯ ಸಂಜೀವಿನಿ ಯೋಜನೆ ಭಾಗ್ಯ!

BIGG NEWS : ರಾಜ್ಯದ ಈ ನೌಕರರಿಗಿಲ್ಲ `ಆರೋಗ್ಯ ಸಂಜೀವಿನಿ ಯೋಜನೆ ಭಾಗ್ಯ!

Kannada News Now 3 years ago

ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿ, ಪರಿಷ್ಕೃತ ಆದೇಶವನ್ನು ಹೊರಡಿಸಿದೆ. ಆದರೆ ಹೈಕೋರ್ಟ್, ವಿಧಾನ ಮಂಡಲದ ನೌಕರರು ಸೇರಿದಂತೆ ಹಲವು ಇಲಾಖೆಯ ನೌಕರರಿಗೆ ಈ ಯೋಜನೆ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡಾವಳಿಯನ್ನು ಹೊರಡಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಒದಗಿಸಲು ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ( Karnataka Arogya Sanjeevini Yojana ) ಅನುಷ್ಠಾನಗೊಳಿಸುವ ಸಂಬಂಧ ಪರಿಷ್ಕೃತ ಆದೇಶವನ್ನು ಹೊರಡಿಸಿದ್ದಾರೆ.

ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು, 1963 ರಡಿ ವೈದ್ಯಕೀಯ ಹಾಜರಾತಿಗೆ ಅರ್ಹರಿರುವ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರು,

ಈ ಯೋಜನೆಗೆ ಒಳಪಡದ ನೌಕರ ವರ್ಗ:

ರಾಜ್ಯ ಉಚ್ಚ ನ್ಯಾಯಾಲಯದ ನೌಕರರು

ರಾಜ್ಯ ವಿಧಾನ ಮಂಡಲದ ನೌಕರರು

'ಆರೋಗ್ಯ ಭಾಗ್ಯ' ಯೋಜನೆಯ ಸೌಲಭ್ಯ ಪಡೆಯುತ್ತಿರುವ ಪೊಲೀಸ್‌ ಇಲಾಖೆಯ ಸಿಬ್ಬಂದಿ.

ಕರ್ನಾಟಕ ನ್ಯಾಯಾಂಗ ಅಧಿಕಾರಿಗಳ ವೈದ್ಯಕೀಯ ಹಾಜರಾತಿ ನಿಯಮಗಳು, 2009 ರಡಿ ವೈದ್ಯಕೀಯ ಸೌಲಭ್ಯ ಪಡೆಯುತ್ತಿರುವ ನ್ಯಾಯಾಂಗ ಅಧಿಕಾರಿಗಳು, ಅಖಿಲ ಭಾರತ ಸೇವೆಗೆ ಸೇರಿದ ಅಧಿಕಾರಿಗಳು.

ಸಾರ್ವಜನಿಕ ಸ್ಥಾಪನೆಗಳು ಅಂದರೆ ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ನಿಗಮ/ ಮಂಡಳಿಗಳು, ಸಹಕಾರ ಸಂಸ್ಥೆಗಳ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಇತರೆ ಸಂಸ್ಥೆಗಳು,

ಸರ್ಕಾರ ಹೊರಡಿಸಿರುವಂತ ಆದೇಶದಲ್ಲಿ ಸಂಜೀವಿನಿ ಯೋಜನೆಯಡಿ ಸರ್ಕಾರಿ ನೌಕರನ ಪತಿ ಅಥವಾ ಪತ್ನಿ, ತಂದೆ ಮತ್ತು ತಾಯಿ (ಮಲತಾಯಿನ್ನೊಳಗೊಂಡಂತೆ) ಅವರು ಸರ್ಕಾರಿ ನೌಕರನೊಂದಿಗೆ ಸಾಮಾನ್ಯವಾಗಿ ವಾಸವಾಗಿದ್ದಲ್ಲಿ ಮತ್ತು ಅವರ ಒಟ್ಟು ಮಾಸಿಕ ಆದಾಯ ಕನಿಷ್ಠ ಕುಟುಂಬ ಪಿಂಚಣಿ( ರೂ.8,500) ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರದಿದ್ದಲ್ಲಿ ಯೋಜನೆಗೆ ಅರ್ಹರು ಎಂದಿದೆ.

ಸರ್ಕಾರಿ ನೌಕರನ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿರುವ ಮಕ್ಕಳು. ಇವರಲ್ಲಿ ದತ್ತು ಪಡೆ ಮಕ್ಕಳು ಮತ್ತು ಮಲ ಮಕ್ಕಳನ್ನೊಳಗೊಂಡಂತೆ ಕುಟುಂಬದ ಸದಸ್ಯರನ್ನು ಯೋಜನೆಯಡಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದೆ.

BREAKING NEWS: ಮಂಡ್ಯದಲ್ಲಿ ದೇವರ ಪ್ರಸಾದ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಹಳೆ ಪಿಂಚಣಿ ಯೋಜನೆ: ಅಧ್ಯಯನಕ್ಕಾಗಿ ರಾಜಸ್ಥಾನಕ್ಕೆ ತೆರಳಿದೆ ಕರ್ನಾಟಕ ತಂಡ


Dailyhunt
Disclaimer: This content has not been generated, created or edited by Dailyhunt. Publisher: Kannada News Now