Dailyhunt
BIGG NEWS : `SSLC' ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

BIGG NEWS : `SSLC' ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

Kannada News Now 2 years ago

ಬೆಂಗಳೂರು : 2022-23ನೇ ಸಾಲಿನ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿಯೂ ಕೊರೊನಾ ಬ್ಯಾಚ್ ಎಂದು ಪರಿಗಣಿಸಿ 26 ಗ್ರೇಸ್ ಅಂಕ ಪಡೆಯುವ ಅವಕಾಶ ಇದೆ.

ಈ ಕುರಿತು ಮಾಹಿತಿ ನೀಡಿರುವ ಎಸ್‌ಎಸ್ ಎಲ್ ಸಿ ಬೊರ್ಡ್ ನಿರ್ದೇಶಕ ರಾಮಚಂದ್ರ, ಈ ಬಾರಿಯೂ ಕೊರೊನಾ ಬ್ಯಾಚ್ ಎಂದು ಪರಿಗಣಿಸಿ ಶೇ.10 ರಷ್ಟು ಗ್ರೇಸ್ ಅಂಕ ನೀಡಲಾಗುವುದು. ಮೂರು ವಿಷಯಗಳಿಗೆ ಮಾತ್ರ ಗ್ರೇಸ್ ಮಾರ್ಕ್ ಅಂಕ ನೀಡಲಾಗುತ್ತದೆ. ತೇರ್ಗಡೆ ಕಡಿಮೆ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಮಾತ್ರ ಇದು ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಎಸೆಸೆಲ್ಸಿಯ 6 ವಿಷಯಗಳ ಪೈಕಿ 3 ವಿಷಯಗಳಲ್ಲಿ ಉತ್ತೀರ್ಣರಾಗಿದ್ದರೆ, ಉಳಿದ 3 ವಿಷಯಗಳಿಗೆ ತಲಾ ಶೇ. 10ರಷ್ಟು ಆದರೆ ಒಟ್ಟು 26 ಅಂಕ ಮೀರದಂತೆ ಕೃಪಾಂಕ ದೊರೆಯಲಿದೆ. ಪ್ರಥಮ ಭಾಷೆಯಲ್ಲಿ ಗರಿಷ್ಠ 10 ಅಂಕ ಮತ್ತು ಉಳಿದ ವಿಷಯಗಳಲ್ಲಿ ಗರಿಷ್ಠ 8 ಅಂಕವನ್ನು ಕೃಪಾಂಕದ ರೂಪದಲ್ಲಿ ಪಡೆಯಬಹುದಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now