ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಚ್ 10 ರೊಳಗೆ ಪೂರ್ಣಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದೆ.
ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಮಾರ್ಚ್ 10 ರೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ.
ಇನ್ನು ಕಂದಾಯ ಮತ್ತಿತರ ಇಲಾಖೆಯ ನಿಯೋಜಿತ ಅಧಿಕಾರಿಗಳನ್ನು ಸದ್ಯಕ್ಕೆ ವರ್ಗಾವಣೆ ಮಾಡುವ ಅಗತ್ಯವಿಲ್ಲ. ಕೆಲವು ಅನಿವಾರ್ಯ ಎನಿಸಿದಲ್ಲಿ ಆಯೋಗದ ಗಮನಕ್ಕೆ ತಂದು ಕೊನೆ ಕ್ಷಣದಲ್ಲೂ ವರ್ಗಾವಣೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಸುತ್ತೋಲೆ ಸ್ಪಷ್ಟಪಡಿಸಿದೆ.
BIG NEWS : ಮಧುಮೇಹ, ಅಧಿಕ ರಕ್ತದೊತ್ತಡ ಸೇರಿ 74 ಔಷಧಿಗಳ ಬೆಲೆ ನಿಗದಿಪಡಿಸಿದ NPPA; ಇಲ್ಲಿದೆ ಇತ್ತೀಚಿನ ದರ

