Dailyhunt
ಗಮನಿಸಿ : ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ಹುದ್ದೆಯ 'ತಾತ್ಕಾಲಿಕ ಜೇಷ್ಠತಾ ಪಟ್ಟಿ' ಪ್ರಕಟ

ಗಮನಿಸಿ : ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ಹುದ್ದೆಯ 'ತಾತ್ಕಾಲಿಕ ಜೇಷ್ಠತಾ ಪಟ್ಟಿ' ಪ್ರಕಟ

Kannada News Now 4 years ago

ಶಿವಮೊಗ್ಗ: ದಿನಾಂಕ: 01-01-2021 ರಲ್ಲಿರುವಂತೆ ಬೆಂಗಳೂರು ವಿಭಾಗದ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರು ಗ್ರೇಡ್ 2 ವೃಂದದ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಇಲಾಖಾ ವೆಬ್‍ಸೈಟ್ schooleducation.kar.nic.in ನಲ್ಲಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರವರ ಕಚೇರಿ(ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿರುತ್ತದೆ.

ಬಸ್‌ ಮೇಲಿನ ಪುನೀತ್‌ ಫೋಟೋಕ್ಕೆ ಮುತ್ತಿಟ್ಟು ಕಣ್ಣೀರು ಸುರಿಸಿದ ವೃದ್ದೆ : ವಿಡಿಯೋ ಇಲ್ಲಿದೆ ನೋಡಿ

ಈ ಕರಡು ತಾತ್ಕಾಲಿಕ ಜೇಷ್ಟತಾ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ ಸಂಬಂಧಿಸಿದ ಶಿಕ್ಷಕರು ಸಮರ್ಥನೀಯ ಪೂರಕ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ನವೆಂಬರ್ 24 ರೊಳಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರವರ ಕಚೇರಿ(ಆಡಳಿತ)ಗೆ ನೇರವಾಗಿ ಸಲ್ಲಿಸಬಹುದೆಂದು ಡಿಡಿಪಿಐ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now