ಬೆಂಗಳೂರು : ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, 2021-22 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2021-22 ನೇ ಸಾಲಿಗೆ ' ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ', ' ಶುಲ್ಕ ವಿನಾಯಿತಿ', ' ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ' ಮತ್ತು ' ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ' ಸೌಲಭ್ಯಕ್ಕಾಗಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 31:10:2021 ಕೊನೆಯ ದಿನಾಂಕವಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ. ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ದಿನಾಂಕ 31:10:2021 ರೊಳಗಾಗಿ ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಇಲಾಖೆ ಪ್ರಕಟಣೆ ಹೊರಡಿಸಿದೆ. ವಿದ್ಯಾರ್ಥಿಗಳು www.ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಛೇರಿ ಅಥವಾ ಕಾಲೇಜು ಸಂಪರ್ಕಿಸಬಹುದಾಗಿದೆ ಎಂದು ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ ಹೊರಡಿಸಿದೆ. ಅಥವಾ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ 080-35254757 ಸಂಪರ್ಕಿಸಬಹುದಾಗಿದೆ. ಈ ಬಗ್ಗೆ ಕ್ರಮ ವಹಿಸುವಂತೆ ರಾಜ್ಯದ ಎಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಹಿಂದುಳಿದ ವರ್ಗಗಳ ಆಯುಕ್ತರು ಆದೇಶ ಹೊರಡಿಸಿದ್ದಾರೆ.

