ತುಮಕೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ (Transfer of teachers) ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (Minister B.C. Nagesh) ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಕಾಯ್ದೆ ತಿದ್ದುಪಡಿ ಅನುಸಾರ ಹೊಸದಾಗಿ ವರ್ಗಾವಣೆ ಪ್ರಕ್ರಿಯೆ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ನಾಗೇಶ್, ಸರ್ಕಾರದ ಮಟ್ಟದಲ್ಲಿ ಶಿಕ್ಷಕರ ವರ್ಗಾವನೆ ಬಗ್ಗೆ ವಿವಿಧ ಹಂತಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೊಸ ಕಾಯ್ದೆ ಅನ್ವಯ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆದಿಲ್ಲ. ಈಗ ಕಾಯ್ದೆ ತಿದ್ದುಪಡಿ ಅನುಸಾರ ಹೊಸದಾಗಿ ವರ್ಗಾವಣೆ ಪ್ರಕ್ರಿಯೆ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

