Dailyhunt
'ವಿದ್ಯಾರ್ಥಿ ವೇತನ' : 'ಅಲ್ಪಸಂಖ್ಯಾತ ಸಮುದಾಯ'ದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

'ವಿದ್ಯಾರ್ಥಿ ವೇತನ' : 'ಅಲ್ಪಸಂಖ್ಯಾತ ಸಮುದಾಯ'ದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

Kannada News Now 4 years ago

ಡಿಜಿಟಲ್ ಡೆಸ್ಕ್ : ಅಲ್ಪಸಂಖ್ಯಾತ ( ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು , ಜೈನರು, ಬೌದ್ದ, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 17 ರವರೆಗೆ ಕಾಲಾವಕಾಶ ವಿಸ್ತರಿಸಿ ಅಲ್ಪಸಂಖ್ಯಾತರ ಕಲ್ಯಾಣ ನಿಗಮ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಇಂದಿನಿಂದ ಅನ್ ಲಾಕ್ 3.0 ಜಾರಿ ಏನಿರುತ್ತದೆ? ಏನಿರೋಲ್ಲ ಇಲ್ಲಿದೆ ಮಾಹಿತಿ

ಅಲ್ಪಸಂಖ್ಯಾತ ( ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು , ಜೈನರು, ಬೌದ್ದ, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಮುಂದುವರೆದು ಎನ್ ಎಸ್ ಪಿ ಸ್ಕಾಲರ್ ಶಿಪ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಮತ್ತೆ ಎಸ್ ಎಸ್ ಪಿ ಸ್ಕಾಲರ್ ಶಿಪ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಸೂ ಚಿಸಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಆದೇಶ ಹೊರಡಿಸಿತ್ತು. ಈಗಾಗಲೇ ಅರ್ಜಿ ಸಲ್ಲಿಕೆಯ ಅವಧಿಯನ್ನು ಸಾಕಷ್ಟು ಬಾರಿ ವಿಸ್ತರಣೆ ಮಾಡಿತ್ತು, ಕೊನೆಯದಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 1 ಕೊನೆಯ ದಿನಾಂಕವಾಗಿತ್ತು. ಇದೀಗ ಕೋವಿಡ್ ಹಿನ್ನೆಲೆ ಸಲ್ಲಿಸಲು ಜುಲೈ 17 ರವರೆಗೆ ಕಾಲಾವಕಾಶ ವಿಸ್ತರಿಸಿ ಅಲ್ಪಸಂಖ್ಯಾತರ ಕಲ್ಯಾಣ ನಿಗಮ ಆದೇಶ ಹೊರಡಿಸಿದೆ.

(Post-matric, Pre matric and Merit-cum-means Scholarship) ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಎನ್ ಎಸ್ ಪಿ ಸ್ಕಾಲರ್ ಶಿಪ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ SSP ( state scholarship portal ) ನಲ್ಲಿ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಅರ್ಹ ವಿದ್ಯಾರ್ಥಿಗಳು ಧೃಡೀಕೃತ ದಾಖಲೆಗಳೊಂದಿಗೆ https://ssp.postmatric.karnataka.gov.in/ portal ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ..

Dailyhunt
Disclaimer: This content has not been generated, created or edited by Dailyhunt. Publisher: Kannada News Now