Dailyhunt Logo
  • Light mode
    Follow system
    Dark mode
    • Play Story
    • App Story
14,256 ಕೊರೊನಾ ಸೋಂಕು ಪತ್ತೆ, 17,130 ಮಂದಿ ಡಿಸ್ಚಾರ್ಜ್

14,256 ಕೊರೊನಾ ಸೋಂಕು ಪತ್ತೆ, 17,130 ಮಂದಿ ಡಿಸ್ಚಾರ್ಜ್

Kannadavahini 5 years ago

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 14,256 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 152 ಮಂದಿ ಅಸು ನೀಗಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,06,39,684ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 1,53,184ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಒಂದು ದಿನದಲ್ಲಿ 17,130 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಒಟ್ಟಾರೆ ಡಿಸ್ಜಾರ್ಜ್ ಸಂಖ್ಯೆ 10,90,838ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,85,662ಕ್ಕೆ ಏರಿದೆ.

ಕಳೆದ 7 ದಿನದಲ್ಲಿ ದೇಶದಲ್ಲಿ 13,90,592 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ. ಕರ್ನಾಟಕದಲ್ಲಿ ಅತೀ ಹೆಚ್ಚು 1.82 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannadavahini