Dailyhunt
ಬಾಗಲಕೋಟೆ: ಸಾವಿನಲ್ಲಿ ಒಂದಾದ ಪ್ರೇಮಿಗಳು!

ಬಾಗಲಕೋಟೆ: ಸಾವಿನಲ್ಲಿ ಒಂದಾದ ಪ್ರೇಮಿಗಳು!

Kannadavahini 1 week ago

ಪ್ರೇಯಸಿ ಆತ್ಮಹತ್ಯೆ ಸುದ್ದಿ ಕೇಳಿ ಪ್ರಿಯಕರ ಕೂಡ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಪ್ರೇಮಿಗಳು ಸಾವಿನಲ್ಲಿ ಒಂದಾದ ದುರಂತ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಕಾರ್ತಿಕ್ (20) ಮತ್ತು ಪವಿತ್ರಾ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ಪವಿತ್ರಾ ಮಂಗಳವಾರ ರಾತ್ರಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಕಾರ್ತಿಕ ಬುಧವಾರ ತನ್ನ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಂಗಳವಾರ ಇಬ್ಬರ ಮಧ್ಯೆ ಮನಸ್ತಾಪ ಬಂದು ಜಗಳವಾಡಿದ್ದರು. ಇದರಿಂದ ನೊಂದ ಪವಿತ್ರಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ನನ್ನಿಂದ ಆಕೆ ಮೃತಪಟ್ಟಿದ್ದಾಳೆ ಎಂದು ನೊಂದ ಕಾರ್ತಿಕ ಕೂಡ ಆತ್ಮಹತ್ಯೆ ದಾರಿ ಹಿಡಿದಿದ್ದಾನೆ.

ಸ್ಥಳಕ್ಕೆ ಬನಹಟ್ಟಿ ಪೋಲಿಸರು ಭೇಟಿ, ಪರಿಶೀಲನೆ ನಡೆಸಿದ್ದು, ಅವರ ಕುಟುಂಬದವರು ನೀಡುವ ದೂರಿನನ್ವಯ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಸಿದ್ದಾರ್ಥ ಗೋಯಲ್ ತಿಳಿಸಿದ್ದಾರೆ

Dailyhunt
Disclaimer: This content has not been generated, created or edited by Dailyhunt. Publisher: Kannadavahini