Dailyhunt Logo
  • Light mode
    Follow system
    Dark mode
    • Play Story
    • App Story
ಬಾಗೇಪಲ್ಲಿ ದೇವಸ್ಥಾನ ಬಳಿ 3 ವಾಹನಗಳು ಡಿಕ್ಕಿ: 6 ಕೂಲಿ ಕಾರ್ಮಿಕರು ದುರ್ಮರಣ

ಬಾಗೇಪಲ್ಲಿ ದೇವಸ್ಥಾನ ಬಳಿ 3 ವಾಹನಗಳು ಡಿಕ್ಕಿ: 6 ಕೂಲಿ ಕಾರ್ಮಿಕರು ದುರ್ಮರಣ

Kannadavahini 1 hr ago

ಚಿಕ್ಕಬಳ್ಳಾಪುರ: ಥಾರ್, ಆಟೋ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಕೂಲಿ ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಸಂಭವಿಸಿದೆ.

ಆಟೋದಲ್ಲಿದ್ದ ಬಾಗೇಪಳ್ಳಿ ಪಟ್ಟಣದ ನಿವಾಸಿಗಳಾದ ಉಮಾದೇವಿ (55), ವಿಜಯಾ (40), ಲಕ್ಷ್ಮಮ್ಮ (50), ಸರೋಜಮ್ಮ ಹಾಗೂ ಆಟೋ ಚಾಲಕ ಆಂಜಿನಪ್ಪ (35) ಮೃತಪಟ್ಟಿದ್ದಾರೆ.

ದುರ್ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂತೆಯೇ ದುರಂತದಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೌಶಲ್ ಚೌಕ್ಸೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ನಿಖರ ಕಾರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ರಸ್ತೆಯಲ್ಲಿ ವೇಗವಾಗಿ ಬಂದ ಥಾರ್ ಕಾರು ತನ್ನ ಮುಂದೆ ಚಲಿಸುತ್ತಿದ್ದ ಆಟೋಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ನಿಯಂತ್ರಣ ತಪ್ಪಿ ಮುಂಭಾಗದಲ್ಲಿದ್ದ ಕ್ಯಾಂಟರ್ ವಾಹನಕ್ಕೆ ಅಪ್ಪಳಿಸಿದೆ. ಪರಿಣಾಮವಾಗಿ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಐವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannadavahini