Wednesday, 16 Sep, 7.09 pm Kannadavahini

ದೇಶ-ವಿದೇಶ
ದೆಹಲಿ ಗಲಭೆ ಪ್ರಕರಣ: 17500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಕಳೆದ ಫೆಬ್ರವರಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ನಡೆದ ಗಲಭೆ ಪ್ರಕರಣದಲ್ಲಿ ಪೊಲೀಸರು 17,500 ಪುಟಗಳ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು, ಎಲ್ಲಾ 15 ಆರೋಪಿಗಳು ಕೇವಲ ಪ್ರತಿಭಟನಾಕಾರರಾಗಿದ್ದಾರೆ.

ಗಲಭೆ ವೇಳೆ 50ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಸೊತ್ತು ಹಾನಿಗೀಡಾಗಿತ್ತು. ಪ್ರಕರಣದ ಕುರಿತು ಸುದೀರ್ಘ ತನಿಖೆ ನಡೆಸಿದ ದೆಹಲಿ ಪೊಲೀಸರು 2 ಸ್ಟೀಲ್ ಟ್ರಂಕ್ ಗಳಲ್ಲಿ ತುಂಬಿದ್ದ 17500 ಪುಟಗಳ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಇದರಲ್ಲಿ 2500 ಪುಟಗಳಲ್ಲಿ ಸಂಕ್ಷಿಪ್ತ ವಿವರ ಸಲ್ಲಿಸಲಾಗಿದೆ.

ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಕೇವಲ ಪ್ರತಿಭಟನೆಯಲ್ಲಿ ಗುರುತಿಸಿಕೊಂಡಿದ್ದ 15 ಮಂದಿಯ ಹೆಸರನ್ನು ಮಾತ್ರ ಉಲ್ಲೇಖಿಸಲಾಗಿದೆ. ಇವರ ವಿರುದ್ಧ ಕಾನೂನು ವಿರೋಧಿ ಚಟುವಟಿಕೆ ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannadavahini
Top