ಡ್ರಗ್ಸ್ ಕೇಸಲ್ಲಿ ನಂಟು ಹೊಂದಿದ ಆರೋಪದಲ್ಲಿ ಬಾಲಿವುಡ್ ನ ಹಾಸ್ಯ ನಟಿ ಭಾರತಿ ಸಿಂಗ್ ಹಾಗೂ ಪತಿಯನ್ನು ಅವರನ್ನು ರಾಷ್ಟ್ರೀಯ ಉದ್ದೀಪನ ನಿಗ್ರಹ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ.
ಶನಿವಾರ ಬೆಳಿಗ್ಗೆ ಮುಂಬೈನ ಭಾರತಿ ಸಿಂಗ್ ಹಾಗೂ ಪತಿ ಹರ್ಷ್ ಲಿಂಬಾಚಿಯಾ ನಿವಾಸದ ಮೇಲೆ ದಾಳಿ ಮಾಡಿದ ಎನ್ ಸಿಬಿ ಅಧಿಕಾರಿಗಳು ಅಕ್ರಮವಾಗಿ ಸಣ್ಣ ಪ್ರಮಾಣದ ನಿಷೇಧಿತ ಡ್ರಗ್ಸ್ ಪತ್ತೆಯಾದ ಹಿನ್ನೆಲೆಯಲ್ಲಿ ಇಬ್ಬರನ್ನೂ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

